ಅನ್ನಭಾಗ್ಯದ ಅಕ್ಕಿಗೆ ಕನ್ನ, ಮೂವರು ಖದೀಮರು ಅರೆಸ್ಟ್

ಬಳ್ಳಾರಿ: ಅಕ್ರಮವಾಗಿ ಸಾಗಿಸುತ್ತಿದ್ದ ಅನ್ನಭಾಗ್ಯ ಅಕ್ಕಿಯನ್ನು ಕುರುಗೋಡು ಪಟ್ಟಣ ಪೊಲೀಸರು ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆದಿದ್ದಾರೆ.
ಖಚಿತ ಮಾಹಿತಿ ಅಧರಿಸಿ ಪೊಲೀಸರು, ಟಾಟಾ ಏಸ್ ವಾಹನದಲ್ಲಿ ಸಾಗಾಣೆ ಮಾಡಲಾಗುತ್ತಿದ್ದ ಅಕ್ಕಿ, ಹಾಗೂ ಮೂವರನ್ನು ಪೊಲೀಸರು ವಶಕ್ಕೆ ಪಡೆದು, ಬಳಿಕ ಆಹಾರ ಇಲಾಖೆಯ ಅಧಿಕಾರಿಗಳಿಗೆ ಮಾಹಿತಿ ರವಾನಿಸಿದ್ದಾರೆ. ಆಗ ಸ್ಥಳಕ್ಕೆ ಆಹಾರ ಇಲಾಖೆ ಅಧಿಕಾರಿಗಳು ದೌಡಾಯಿಸಿದ್ದಾರೆ. ಪ್ರಕರಣ ದಾಖಲಿಸಿ, ಕ್ರಮ ಕೈಗೊಳ್ಳುವುದಾಗಿ ಕುರುಗೋಡು ಪಿಎಸ್ಐ ಚೈತನ್ಯ ಕುಮಾರ್ ತಿಳಿಸಿದ್ದಾರೆ.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗೆ ಸಂಪರ್ಕಿಸಿ: contact@firstnews.tv