ಅನ್ನಭಾಗ್ಯ ಯೋಜನೆಯ ಅಕ್ಕಿ ಪ್ರಮಾಣ ಕಡಿತ ರದ್ದು, ಫ್ರೀ ಬಸ್​ ಪಾಸ್​ಗೆ ಕೊಕ್​

ಬೆಂಗಳೂರು: ಅನ್ನಭಾಗ್ಯ ಯೋಜನೆಯ ಅಕ್ಕಿ ಪ್ರಮಾಣ ಕಡಿತವನ್ನು ರದ್ದು ಮಾಡಿದ್ದೇವೆ ಮತ್ತು ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮಕ್ಕೆ ₹ 2500 ಕೋಟಿ ಅನುದಾನ ಹೆಚ್ಚಳ ಮಾಡಿದ್ದೇವೆ ಎಂದು ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ ಹೇಳಿದರು.
ವಿಧಾನಸಭಾ ಅಧಿವೇಶನದಲ್ಲಿ ಬಜೆಟ್​ ಮೇಲಿನ ಮುಂದುವರಿದ ಚರ್ಚೆಯಲ್ಲಿ ಮಾತನಾಡಿದ ಅವರು, ಅನ್ನಭಾಗ್ಯ ಯೋಜನೆಯಲ್ಲಿ ಈ ಮುಂಚೆ 7 ಕೆಜಿ ಅಕ್ಕಿ ಕೊಡುತ್ತಿದ್ದು, ಬಜೆಟ್​ನಲ್ಲಿ 2 ಕೆಜಿ ಕಡಿತ ಮಾಡಿ, 5 ಕೆಜಿ ಅಕ್ಕಿಯನ್ನು ಘೋಷಿಸಲಾಗಿತ್ತು. ಆದರೆ, ಈಗ 2 ಕೆಜಿ ಅಕ್ಕಿ ಕಡಿತವನ್ನು ರದ್ದು ಮಾಡಿದ್ದೇವೆ ಎಂದು ಹೇಳಿದರು. ಅಲ್ಲದೇ, ವಿದ್ಯಾರ್ಥಿಗಳಿಗೆ ಉಚಿತ ಬಸ್​ ಪಾಸ್​ ನೀಡುತ್ತಿಲ್ಲ ಎಂದೂ ಹೇಳಿದರು.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗೆ ಸಂಪರ್ಕಿಸಿ: contact@firstnews.tv