ಕರ್ತವ್ಯನಿರತ ಎಎಸ್ಐ ಹೃದಯಾಘಾತದಿಂದ ಸಾವು

ಹಾಸನ: ಕರ್ತವ್ಯನಿರತ ಎಎಸ್ಐ ಒಬ್ಬರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಹೊಳೆನರಸೀಪುರ ತಾಲೂಕಿನ ಹಳ್ಳಿ ಮೈಸೂರು ಠಾಣೆಯಲ್ಲಿ ಎಎಸ್​ಐ ಸುರೇಶ್ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ಕರ್ತವ್ಯದಲ್ಲಿ ಇರುವಾಗ ಸುರೇಶ್​ ಅವರಿಗೆ ಎದೆನೋವು ಕಾಣಿಸಿಕೊಂಡಿದೆ. ತಕ್ಷಣ ಅವರನ್ನು ಆಸ್ಪತ್ರೆಗೆ ಕೊಂಡೊಯ್ಯುಲಾಗ್ತಿತ್ತು. ಆದರೆ ಮಾರ್ಗ ಮಧ್ಯೆ ಸುರೇಶ್​ ಸಾವಿಗೀಡಾಗಿದ್ದಾರೆ. ಕಳೆದ ಒಂದೂವರೆ ವರ್ಷದಿಂದ ಕರ್ತವ್ಯ ನಿರ್ವಹಿಸುತ್ತಿದ್ದ ಸುರೇಶ್​, ಇದಕ್ಕೂ ಮೊದಲು ಆಲೂರಿನಲ್ಲಿ ಕೆಲಸ ಮಾಡಿದ್ದರು. ಸುರೇಶ್​ ಪ್ರಾಮಾಣಿಕವಾಗಿ ಸೇವೆ ಸಲ್ಲಿಸಿದ್ದರು. ಇತ್ತೀಚೆಗಷ್ಟೇ ಡಿಸಿಎಂ ಪರಮೇಶ್ವರ್ ಸುರೇಶ್​ಗೆ ಅಭಿನಂದನೆ ಸಲ್ಲಿಸಿದ್ದರು.