ವಿಧಾನ ಪರಿಷತ್ತಿನ ನೈಋತ್ಯ ಪದವೀಧರರ ಚುನಾವಣೆಗೆ ಕೊಡಗು ಸಜ್ಜು.!

ಕೊಡಗು: ವಿಧಾನ ಪರಿಷತ್ತಿನ ನೈಋತ್ಯ ಪದವೀಧರರ ಮತ್ತು ನೈರುತ್ಯ ಶಿಕ್ಷಕರ ಕ್ಷೇತ್ರದಿಂದ ನಡೆಯುವ ಚುನಾವಣೆ ಸಂಬಂಧ ಜೂನ್ 08 ರಂದು ಮಡಿಕೇರಿ ನಗರಸಭೆ, ವಿರಾಜಪೇಟೆ ಹಾಗೂ ಸೋಮವಾರಪೇಟೆ ಪಟ್ಟಣ ಪಂಚಾಯತ್ ಹಾಗೂ ಕುಶಾಲನಗರದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಸ್ಥಾಪಿಸಿರುವ ಮತಗಟ್ಟೆಗಳಲ್ಲಿ ಮತದಾನ ನಡೆಯಲಿದೆ.
ಮತದಾನ ದಿನದ 48 ಗಂಟೆ ಪೂರ್ವದಿಂದ ಅನ್ವಯಿಸುವಂತೆ ಸಂಬಂಧಿಸಿದ ಕ್ಷೇತ್ರಗಳಲ್ಲಿ ರಾಜಕೀಯ ಸಭೆ-ಸಮಾರಂಭ, ಮೆರವಣಿಗೆ ನಡೆಸುವುದು ಅಥವಾ ಇತರೆ ರೀತಿಯ ಉಪಕರಣಗಳ ಮೂಲಕ ಯಾವುದೇ ಚುನಾವಣಾ ವಿಷಯಗಳನ್ನು ಸಾರ್ವಜನಿಕರಿಗೆ ಪ್ರದರ್ಶಿಸುವುದು ಮುಂತಾದವುಗಳಿಗೆ ಪ್ರಜಾ ಪ್ರತಿನಿಧಿ ಕಾಯ್ದೆ 1951ರ ಕಾಲಂ 126ರಡಿ ನಿರ್ಬಂಧವಿರುತ್ತದೆ. ಅದರಂತೆ ಪಾರದರ್ಶಕ, ಅಕ್ರಮ ರಹಿತ ಹಾಗೂ ಮತದಾನ ಸಮಯದಲ್ಲಿ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ನಿಟ್ಟಿನಲ್ಲಿ ಸೆಕ್ಷನ್ 144 ಮತ್ತು 144(ಎ)ರಡಿ ದತ್ತವಾದ ಅಧಿಕಾರದಂತೆ ಜೂನ್ 7 ರ ಬೆಳಗ್ಗೆ 6 ಗಂಟೆಯಿಂದ ಜೂನ್ 8 ರಾತ್ರಿ, 8 ಗಂಟೆವರೆಗೆ ಮತಗಟ್ಟೆ ಸುತ್ತಲಿನ 200 ಮೀಟರ್ ವ್ಯಾಪ್ತಿಯನ್ನು ‘ನಿರ್ಬಂಧಿತ ಪ್ರದೇಶ’ವೆಂದು ಘೋಷಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಪಿ.ಐ.ಶ್ರೀವಿದ್ಯಾ ಆದೇಶ ಹೊರಡಿಸಿದ್ದಾರೆ.
ನಿರ್ಬಂಧಿತ 200 ಮೀಟರ್ ಪ್ರದೇಶದಲ್ಲಿ ಐದಕ್ಕಿಂತ ಹೆಚ್ಚಿಗೆ ಜನ ಗುಂಪು ಸೇರುವುದು, ಮಾರಕ ಆಯುಧಗಳನ್ನು ಹೊಂದಿರುವುದು ಅಥವಾ ಹಿಡಿದು ಓಡಾಡುವುದು ಮುಂತಾದವುಗಳನ್ನು ಸಂಪೂರ್ಣವಾಗಿ ನಿಷೇಧಿಸಿದೆ. ಈ ಆದೇಶವು ಸರ್ಕಾರಿ ಕರ್ತವ್ಯದ ನಿಮಿತ್ತ ಹಾಗೂ ಕರ್ತವ್ಯದಲ್ಲಿರುವ ಸಿಬ್ಬಂದಿ ಬಳಸೋದಕ್ಕೆ ಅನ್ವಯಿಸುವುದಿಲ್ಲ.

ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ: contact@firstnews.tv