ಚರ್ಚ್ ದಾಳಿ ಸುಳ್ಳುಸುದ್ದಿ, ಆರೋಪಿಗಳ ಬಂಧನ

ದಕ್ಷಿಣ ಕನ್ನಡ: ಚರ್ಚ್ ನಲ್ಲಿ ದಾಳಿಯಾಗಿದೆಯೆಂದು ಸುಳ್ಳು ಸುದ್ದಿ ಹಬ್ಬಿಸಿದ ಆರೋಪ ಮೇಲೆ ಚಿಕ್ಕಮಗಳೂರು ಮೂಲದ ಇಬ್ಬರನ್ನು ಬಂಧಿಸಲಾಗಿದೆ. ಸುನಿಲ್ ವೇಗಸ್ (34), ಸಚಿತ್ ಪಿ.ಪಿ. (23) ಬಂಧಿತ ಆರೋಪಿಗಳು. ಇನ್ನು ಆರೋಪಿಗಳು ಎನ್.ಆರ್ ಪುರ ತಾಲೂಕಿನ ಅರಳಿಕೊಪ್ಪ ಗ್ರಾಮದ ನಿವಾಸಿಗಳಾಗಿದ್ದು ಹಳೇ ವಿಡಿಯೋ ಹರಿಯಬಿಟ್ಟು ಶಾಂತಿ ಕದಡಲು ಯತ್ನಿಸಿದ್ದರು ಎಂದು ತಿಳಿದುಬಂದಿದೆ.  ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರಿನ ಸೆಂಟ್ರಲ್ ಉಪ ವಿಭಾಗದ ಎಸಿಪಿ ನೇತೃತ್ವದಲ್ಲಿ ಆರೋಪಿಗಳನ್ನು ಬಂಧಿಸಲಾಗಿದೆ.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗೆ ಸಂಪರ್ಕಿಸಿ: contact@firstnews.tv