ಬಿಜೆಪಿ ಮುಖಂಡನ ಮೇಲೆ ಖಾರದ ಪುಡಿ ಎರಚಿ ಹಲ್ಲೆಗೆ ಯತ್ನ!

ಆನೇಕಲ್​: ಬಿಜೆಪಿ ಮುಖಂಡನ ಮೇಲೆ ಖಾರದ ಪುಡಿ ಎರಚಿ ಮೂವರು ದುಷ್ಕರ್ಮಿಗಳು ಹಲ್ಲೆಗೆ ಯತ್ನಿಸಿದ ಘಟನೆ ಆನೇಕಲ್‌ನ ಹಿಲಲಿಗೆ ಬಳಿ ನಿನ್ನೆ ರಾತ್ರಿ ನಡೆದಿದೆ. ಆನೇಕಲ್​ನ ಹಿಲಲಿಗೆ ನಿವಾಸಿಯಾಗಿದ್ದ ಬಿಜೆಪಿ ಮುಖಂಡ ಮಂಜುನಾಥ ರೆಡ್ಡಿ ಚಂದಾಪುರದಿಂದ ಮನೆ ಕಡೆಗೆ ಬೈಕ್​ನಲ್ಲಿ ತೆರಳುತ್ತಿದ್ದಾಗ ಮಾರ್ಗ ಮಧ್ಯೆ ಕೆರೆ ಏರಿ ಮೇಲೆ ಅಡ್ಡಗಟ್ಟಿದ ದುಷ್ಕರ್ಮಿಗಳು ಖಾರದ ಪುಡಿ ಎರಚಿ ಹಲ್ಲೆಗೆ ಯತ್ನಿಸಿದ್ದಾರೆ.
ಮಂಜುನಾಥ ರೆಡ್ಡಿ ಮಾಜಿ ಸಚಿವ ಎ. ನಾರಾಯಣ ಸ್ವಾಮಿಯ ಆಪ್ತ ಕಾರ್ಯದರ್ಶಿಯಾಗಿದ್ದ. ಸ್ಥಳಕ್ಕೆ ಬೆಂಗಳೂರು ಗ್ರಾಮಾಂತರ ಎಸ್​ಪಿ ಭೀಮಾಶಂಕರ್​ ಭೇಟಿ ನೀಡಿದ್ದು, ಡಿವೈಎಸ್​ಪಿ ಉಮೇಶ್​ ನೇತೃತ್ವದಲ್ಲಿ ಪ್ರಕರಣ ತನಿಖೆಗಾಗಿ ತಂಡ ರಚಿಸುವುದಾಗಿ ತಿಳಿಸಿದ್ದಾರೆ. ಸೂರ್ಯಸಿಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

Leave a Reply

Your email address will not be published. Required fields are marked *