ಸರಣಿ ಅಪಘಾತ ಸ್ಥಳದಲ್ಲಿಯೇ ಮಹಿಳೆ ಸಾವು

ಬೆಂಗಳೂರು ಗ್ರಾಮಾಂತರ: ಜಿಲ್ಲೆಯ ನೆಲಮಂಗಲ ತಾಲ್ಲೂಕಿನ ಅರಿಶಿನಕುಂಟೆ ಗ್ರಾಮದ ರಾಷ್ಟ್ರೀಯ ಹೆದ್ದಾರಿ 4ರ ಬಳಿ ಕಾರು, ಆಟೋ ಹಾಗೂ ಲಾರಿ ಮಧ್ಯೆ ಸರಣಿ ಅಪಘಾತ ಸಂಭವಿಸಿದ್ದು, ಈ ಘಟನೆಯಲ್ಲಿ ಮಹಿಳೆಯೊಬ್ಬರು ಮೃತ ಪಟ್ಟಿದ್ದಾರೆ.
ಮೃತ ದುರ್ದೈವಿ ಮಂಜಮ್ಮ (52), ಮೂಲತ ತುಮಕೂರಿನ ಶಿರಾ ತಾಲ್ಲೂಕಿನ ನಿವಾಸಿ. ಆಟೋದಲ್ಲಿ ನೆಲಮಂಗಲದಿಂದ ನೆಲಗದರನಹಳ್ಳಿಗೆ ಹೋಗುತ್ತಿರುವ ವೇಳೆ ಈ ಘಟನೆ ಸಂಭವಿಸಿದೆ. ಮೊದಲು ಕಾರಿಗೆ ಆಟೋ ಡಿಕ್ಕಿ ಹೊಡೆದಿದೆ. ನಂತರ ಹಿಂಬದಿಯಿಂದ ಲಾರಿ ಬಂದು ಆಟೊಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಆಟೋದಲ್ಲಿದ್ದ ಮಂಜಮ್ಮ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬೆಂಗಳೂರಿನ ಪೀಣ್ಯ ದಾಸರಹಳ್ಳಿಯ 8ನೇ ಮೈಲಿಯ ನೆಲಗದರನಹಳ್ಳಿಯಲ್ಲಿ ನಿವಾಸಿಗಳಾದ ಆಟೋ ಚಾಲಕ ಹನುಮಂತೇಗೌಡ, ಪತ್ನಿ ಪುಷ್ಪಲತಾ, ಮಕ್ಕಳಾದ ಅಂಕಿತಾ, ಪೂರ್ಣಿಮಾರಿಗೆ ಗಂಭೀರ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಘಟನೆ ಕುರಿತು ನೆಲಮಂಗಲದ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *