ಅಟೋಗಳ ಮುಖಾಮುಖಿ ಡಿಕ್ಕಿ: 6 ಜನರಿಗೆ ಗಂಭೀರ ಗಾಯ

ಚಿತ್ರದುರ್ಗ: ಅಟೋಗಳೆರಡರ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ 6 ಜನರು ಗಂಭೀರವಾಗಿ ಗಾಯಗೊಂಡ ಘಟನೆ ಹಿರಿಯೂರು ತಾಲೂಕಿನ ಲಕ್ಕವ್ವನಹಳ್ಳಿಯಲ್ಲಿ ನಡೆದಿದೆ. ಒಂದು ಅಟೋದಲ್ಲಿ ಪ್ರಯಾಣಿಸುತ್ತಿದ್ದ 7 ಜನ ಹಿರಿಯೂರು ಟೌನ್ ನಿವಾಸಿಗಳಾಗಿದ್ದಾರೆ. ಇನ್ನೊಂದು ಅಟೋದಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ಸೀಗೆಹಳ್ಳಿ ನಿವಾಸಿಗಳು ಎನ್ನಲಾಗಿದೆ. ಅಟೋದಲ್ಲಿದ್ದ ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಗಾಯಾಳುಗಳನ್ನು ಹಿರಿಯೂರು ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕುರಿತಂತೆ ಹಿರಿಯೂರು ನಗರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಕ್ಕಾಗಿ ಸಂಪರ್ಕಿಸಿ: contact@firstnews.tv