ಸಂಪುಟದಲ್ಲಿ ಕಡೆಗಣನೆ, ಕುರುಬ ಸಮುದಾಯ ತೀವ್ರ ಆಕ್ರೋಶ

ಬೆಳಗಾವಿ: ಸಮ್ಮಿಶ್ರ ಸರ್ಕಾರದ ಸಚಿವ ಸಂಪುಟ ವಿಸ್ತರಣೆಯಲ್ಲಿ ಕುರುಬ ಸಮುದಾಯಕ್ಕೆ ಅನ್ಯಾಯ ಮಾಡಲಾಗಿದೆ ಅಂತಾ ಹಾಲು‌ಮತ ಮಹಾಸಭಾದ ತಾಲೂಕು ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ರು. ಜಿಲ್ಲೆಯ ಗೋಕಾಕ್ ನಗರದ ಬಸವೇಶ್ವರ ವೃತ್ತದಲ್ಲಿ ಸೇರಿದ ಕಾರ್ಯಕರ್ತರು, ನೂರಾರು ಕುರಿಗಳನ್ನು ತಂದು‌ ಧರಣಿ ನಡೆಸಿದ್ರು. ಅಲ್ಲದೆ ಟೈರ್​ಗೆ ಬೆಂಕಿ ಹಚ್ಚಿ ಕಾಂಗ್ರೆಸ್ ಹೈಕಮಾಂಡ್ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದ್ರು. ಇನ್ನು ಸಚಿವ ಸಂಪುಟ ವಿಸ್ತರಣೆಯ ಮುಂದಿನ ಕಂತಿನಲ್ಲಿ‌ ಕುರುಬ ಸಮುದಾಯದ ಶಾಸಕರಿಗೆ ಸಚಿವ ಸ್ಥಾನ ನೀಡಲೇಬೇಕೆಂದು ಹಕ್ಕೊತ್ತಾಯ ಮಂಡಿಸಿದ್ರು.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗೆ ಸಂಪರ್ಕಿಸಿ: contact@firstnews.tv