ರೈತ ಬಾಂಧವರೇ, ತಂಬಾಕು ನಿಲ್ಲಿಸಿ ಸಿರಿಧಾನ್ಯ ಬೆಳೆಯಿರಿ..!

ಮೈಸೂರು: ಇಂದು ವಿಶ್ವತಂಬಾಕು ರಹಿತ ದಿನಾಚರಣೆ ಹಿನ್ನೆಲೆಯಲ್ಲಿ, ಮೈಸೂರು ಜಿಲ್ಲೆ ಆರೋಗ್ಯ ಮತ್ತು ಕಲ್ಯಾಣ ಕುಟುಂಬ ಇಲಾಖೆಯಿಂದ ಜಾಗೃತಿ ಕಾರ್ಯಕ್ರಮ ನಡೆಯಿತು. ತಂಬಾಕು ಸೇವನೆಯಿಂದಾಗುವ ಅನಾರೋಗ್ಯದ ಕುರಿತು ಸಾರ್ವಜನಿಕರಿಗೆ ಮಾಹಿತಿ ನೀಡಲಾಯಿತು.
ನಗರದ ಕೋಟೆ ಆಂಜನೇಯಸ್ವಾಮಿ ದೇಸ್ಥಾನದ ಆವರಣದಿಂದ ಜೆಎಸ್ಎಸ್ ವೈದ್ಯಕೀಯ ಸಮೂಹ ಮತ್ತು ಮೈಸೂರು ವೈದ್ಯಕೀಯ ಕಾಲೇಜು, ಜೆಎಸ್ಎಸ್​ ನರ್ಸಿಂಗ್ ಕಾಲೇಜು ವಿದ್ಯಾರ್ಥಿಗಳು ಜಾಗೃತಿ ಜಾಥಾ ನಡೆಸಿದ್ರು. ರೈತ ಬಾಂಧವರೇ ತಂಬಾಕು ನಿಲ್ಲಿಸಿ ಸಿರಿಧಾನ್ಯ ಬೆಳೆಯಿರಿ. ತಂಬಾಕು ಸೇವನೆ ಮೃತ್ಯುಗೆ ಆಹ್ವಾನ ಅನ್ನೋ ಬಿತ್ತಿ ಪತ್ರಗಳನ್ನು ಹಿಡಿದು ಸುಮಾರು 450ಕ್ಕೂ ಹೆಚ್ಚು ವಿದ್ಯಾರ್ಥಿಗಳು ಜಾಥಾದಲ್ಲಿ ಭಾಗವಹಿಸಿದ್ರು. ಜೆಎಸ್ಎಸ್​ ನರ್ಸಿಂಗ್ ಕಾಲೇಜು ವಿದ್ಯಾರ್ಥಿಗಳು ಬ್ಯಾಂಡ್ ಬಾರಿಸಿಕೊಂಡು ನಗರದ ಪ್ರಮುಖ ರಸ್ತೆಗಳಲ್ಲಿ ಜಾಥಾ ನಡೆಸಿದ್ರು
ಜಾಗೃತಿ ಜಾಥಾಗೆ ಚಾಲನೆ ನೀಡಿ ಮಾತನಾಡಿದ ಎಡಿಸಿ ಟಿ. ಯೋಗೇಶ್, ಯುವಕರು ತಂಬಾಕು ಸೇವನೆಯಿಂದ ದೂರ ಇರಬೇಕು. ತಂಬಾಕಿನಿಂದಾಗುವ ದುಷ್ಪರಿಣಾಮಗಳ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಬೇಕು ಎಂದು ಕಿವಿಮಾತು ಹೇಳಿದ್ರು.

 

 

 

ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ: contact@firstnews.tv