ಸಮ್ಮಿಶ್ರ ಸರಕಾರ ರಚನೆಯಾದ್ರೆ, ಹಾಸನದಲ್ಲಿ ಕಾಂಗ್ರೆಸ್ ಸಮಾಧಿಯಾಗಲಿದೆ..!

ಹಾಸನ: ರಾಜ್ಯದಲ್ಲಿ ಕಾಂಗ್ರೆಸ್- ಜೆಡಿಎಸ್ ಸಮ್ಮಿಶ್ರ ಸರಕಾರ ರಚನೆಯಾದರೆ, ಹಾಸನ ಜಿಲ್ಲೆಯಲ್ಲಿ ಕಾಂಗ್ರೆಸ್ ಸಮಾಧಿಯಾಗಲಿದೆ ಅಂತಾ ಹೊಳೆನರಸೀಪುರ ಕಾಂಗ್ರೆಸ್ ಪರಾಜಿತ ಅಭ್ಯರ್ಥಿ ಬಾಗೂರು ಮಂಜೇಗೌಡ ಸಿಡಿಗುಂಡು ಹಾರಿಸಿದ್ದಾರೆ.
ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕಾಂಗ್ರೆಸ್​​​ ಹಾಗೂ ಜೆಡಿಎಸ್​​ ದೋಸ್ತಿಯಾದ್ರೆ ಜಿಲ್ಲೆಯ ಕಾಂಗ್ರೆಸ್ ಕಾರ್ಯಕರ್ತರ ಕಗ್ಗೊಲೆಯಾಗಲಿದೆ ಅಂತಾ ಸಮ್ಮಿಶ್ರ ಸರಕಾರ ರಚನೆಗೆ ತೀವ್ರ ವಿರೋಧ ವ್ಯಕ್ತಪಡಿಸಿದರು. ತಮ್ಮ ಪರ ಪ್ರಚಾರಕ್ಕೆ ಬಾರದ ಸಿಎಂ ಸಿದ್ದರಾಮಯ್ಯ ವಿರುದ್ಧ ಪರೋಕ್ಷ ಅಸಮಾಧಾನ ವ್ಯಕ್ತಪಡಿಸಿದ ಮಂಜೇಗೌಡ, ಅವರ ಮೇಲೆ ಯಾವ ಒತ್ತಡ ಇತ್ತೋ ನನಗೆ ಗೊತ್ತಿಲ್ಲ. ಆದರೆ ನಾನು ಹರಕೆಯೆ ಕುರಿ ಆಗಿಲ್ಲ, ಬಲಿಪಶು ಆಗಿಲ್ಲ ಎಂದರು.
ಇನ್ನು ರಾಜಕೀಯದಲ್ಲಿ ಏನು ಬೇಕಾದ್ರೂ ಆಗಬಹುದು. ಕುಮಾರಸ್ವಾಮಿ ಸಿಎಂ ಆಗಲ್ಲ ಅಂತಾ ಸಿದ್ದರಾಮಯ್ಯ ಹೇಳುತ್ತಿದ್ದರು. ಆದರೆ ಅವರೇ ಈಗ ಕುಮಾರಸ್ವಾಮಿಯನ್ನು ಸಿಎಂ ಮಾಡಲು ಹೊರಟಿಲ್ಲವೇ? ಅಂತಾ ಪ್ರಶ್ನಿಸಿದರು. ಇನ್ನು ತಮ್ಮ ಸೋಲನ್ನು ಸಮರ್ಥಿಸಿಕೊಂಡ ಅವರು, ಭಾವನಾತ್ಮಕ ವಿಷಯದಲ್ಲಿ ರೇವಣ್ಣ ಅವರಿಗೆ ಗೆಲುವಾಗಿದೆ. 270 ಗ್ರಾಮಗಳಲ್ಲಿ ದೇವಾಲಯ ಅಪೂರ್ಣವಾಗಿರುವುದರಿಂದ ಜನ ಅವರಿಗೆ ವೋಟ್ ಹಾಕಿದ್ದಾರೆ ಎಂದರು.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗಾಗಿ ಸಂಪರ್ಕಿಸಿ: contact@firstnews.tv