ಬಂಡೀಪುರದಲ್ಲಿ ಮತ್ತೊಂದು ಹುಲಿ ಸಾವು

ಚಾಮರಾಜನಗರ : ಬಂಡೀಪುರ ಹುಲಿ ಸಂರಕ್ಷಿತಾರಣ್ಯದಲ್ಲಿ ಮತ್ತೊಂದು ಹುಲಿ ಸಾವನ್ನಪ್ಪಿದೆ. ಮತ್ತೊಂದು ಹುಲಿಯೊಂದಿಗಿನ ಕಾದಾಟದಲ್ಲಿ 5 ವರ್ಷದ ಈ ಹುಲಿ ಸಾವನ್ನಪ್ಪಿರಬಹುದು ಎಂದು ಹಿರಿಯ ಅಧಿಕಾರಿಗಳು ಹೇಳಿದ್ದಾರೆ.

ಮೃತ ಹುಲಿಯ ಚರ್ಮ, ಉಗುರುಗಳು ಮತ್ತು ಕೋರೆಹಲ್ಲುಗಳು ಹಾನಿಯಾಗಿವೆ. ಪಶು ವೈದ್ಯರು ಹುಲಿಯ ಮೃತದೇಹವನ್ನು ಮರಣೋತ್ತರ ಪರೀಕ್ಷೆ ನಡೆಸಿದ್ದಾರೆ. ಅಂಗಾಂಗಗಳನ್ನು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ ಎಂದು ತಿಳಿಸಿದ್ದಾರೆ.

ಬಂಡೀಪುರ ಹುಲಿ ಸಂರಕ್ಷಿತಾರಣ್ಯದಲ್ಲಿ 9 ತಿಂಗಳ ಹಿಂದೆ 6 ಹುಲಿಗಳು ಸಾವನ್ನಪ್ಪಿದ್ದವು. 12 ದಿನಗಳ ಹಿಂದಷ್ಟೇ ಎರಡು ಹುಲಿಗಳು ಮೃತಪಟ್ಟಿದ್ದವು. ಹುಲಿಗಳ ಸಾವಿಗೆ ಪ್ರಮುಖ ಕಾರಣ ತಿಳಿದುಬಂದಿಲ್ಲ. ವಿಧಿವಿಜ್ಞಾನ ಪ್ರಯೋಗಾಲಯದ ವರದಿಗಾಗಿ ಅಧಿಕಾರಿಗಳು ಕಾಯುತ್ತಿದ್ದಾರೆ.

ನವೆಂಬರ್​ನಿಂದ ಹುಲಿಗಳು ಒಂದಾಗುವ ಸಮಯವಾಗಿದ್ದು, ಈ ಸಂದರ್ಭದಲ್ಲಿ ಹುಲಿಗಳ ನಡುವೆ ಕಾದಾಟ ಏರ್ಪಡುವುದು ಸಾಮಾನ್ಯವಾಗಿರುತ್ತದೆ ಎಂದು ಅಧಿಕಾರಿ ಹೇಳಿದ್ದಾರೆ.

Leave a Reply

Your email address will not be published. Required fields are marked *