ಅಪಘಾತ ನೋಡಿದ್ರೂ ಡೋಂಟ್ ಕೇರ್ ಎಂದ್ರು!

ಬೆಂಗಳೂರು: ಬೆಂಗಳೂರಲ್ಲಿ ಅಪಘಾತವಾಗಿ ರಕ್ತದ ಮಡುವಿನಲ್ಲಿ ಬೈಕ್ ಸವಾರ ಒದ್ದಾಡುತ್ತಿದ್ದರೂ ಆತನನ್ನು ಆಸ್ಪತ್ರೆಗೆ ಸೇರಿಸದೇ ಜನ ಅಮಾನವೀಯರಾಗಿ ವರ್ತಿಸಿದ್ದಾರೆ. ಮೈಸೂರು ಬ್ಯಾಂಕ್ ಬಳಿಯ ಶಿಕ್ಷಕರ ಸದನದ ಎದುರು ಈ ಘಟನೆ ನಡೆದಿದೆ.

ಮೆಜೆಸ್ಟಿಕ್ ಮಾರ್ಗವಾಗಿ ಅತೀ ವೇಗದಲ್ಲಿ ಬರುತ್ತಿದ್ದ ಬೈಕ್ ಸವಾರ ಕಾರ್​ಗೆ ಡಿಕ್ಕಿ ಹೊಡೆದು ನೆಲಕ್ಕೆ ಬಿದ್ದು ತೀವ್ರ ರಕ್ತಸ್ರಾವದಿಂದ ಬಳಲುತ್ತಿದ್ದ. ಬೈಕ್ ಸವಾರ ರಕ್ತದ ಮಡುವಿನಲ್ಲಿ ಒದ್ದಾಡುತ್ತಿದ್ದರೂ ಜನ ಕ್ಯಾರೆ ಎನ್ನಲಿಲ್ಲ. ಈ ವೇಳೆ ಘಟನಾ ಸ್ಥಳಕ್ಕೆ ದೌಡಾಯಿಸಿದ ಹಲಸೂರು ಗೇಟ್ ಟ್ರಾಫಿಕ್ ಪೊಲೀಸರು ಗಂಭೀರವಾಗಿ ಗಾಯಗೊಂಡಿದ್ದ ಬೈಕ್ ಸವಾರನನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗಾಗಿ ಸಂಪರ್ಕಿಸಿ: contact@firstnews.tv