ಸಾಲ ಮನ್ನಾ ನಿರೀಕ್ಷೆಯಲ್ಲಿರುವ ರೈತರಿಗೆ ಬ್ಯಾಂಕ್​ ಶಾಕ್​.!

ಚಿಕ್ಕಮಗಳೂರು: ಅತ್ತ ಸಾಲಮನ್ನಾ ಮಾಡೋದಕ್ಕೆ ಸಮ್ಮಿಶ್ರ ಸರ್ಕಾರ ಸರ್ಕಸ್‌ ಮಾಡ್ತಿದ್ರೆ, ಇತ್ತ ಬ್ಯಾಂಕ್‌, ರೈತರಿಗೆ ಸಾಲ ಮರುಪಾವತಿ ಮಾಡುವಂತೆ ನೋಟಿಸ್‌ ನೀಡಿದೆ. ಇದು ಸಾಲಮನ್ನಾ ನಿರೀಕ್ಷೆಯಲ್ಲಿದ್ದ ರೈತರಿಗೆ ಶಾಕ್‌ ನೀಡಿದೆ. ಚಿಕ್ಕಮಗಳೂರಿನ ಮೂಡಿಗೆರೆಯಲ್ಲಿ ಭಾರತೀಯ ಸ್ಟೇಟ್‌ ಬ್ಯಾಂಕ್‌ ರೈತರಿಗೆ ಸಾಲಮರುಪಾವತಿ ಮಾಡುವಂತೆ ನೋಟಿಸ್‌ ನೀಡಿದೆ. 2015, 2016, 2017 ಮತ್ತು 2018ನೇ ಸಾಲಿನ ಸಾಲವನ್ನು ಮರುಪಾವತಿ ಮಾಡುವಂತೆ ತಿಳಿಸಿದೆ. ಇದ್ರಿಂದ ಸಾಲಮನ್ನಾ ನಿರೀಕ್ಷೆಯಲ್ಲಿದ್ದ ರೈತರು ಆತಂಕಕ್ಕೆ ಒಳಗಾಗಿದ್ದಾರೆ.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗೆ ಸಂಪರ್ಕಿಸಿ:contact@firstnews.tv