ಪ್ಲಾಸ್ಟಿಕ್ ಮಾರಾಟ ಮಾಡುತ್ತಿದ್ದ ಮಳಿಗೆಗಳ ಮೇಲೆ ದಾಳಿ

ಬೆಂಗಳೂರು: ನಿಷೇಧಿತ ಪ್ಲಾಸ್ಟಿಕ್ ಮಾರಾಟ ಮಾಡುತ್ತಿದ್ದ ಮಳಿಗೆಗಳ ಮೇಲೆ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಮತ್ತು ಬಿಬಿಎಂಪಿ ಅಧಿಕಾರಿಗಳ ಜಂಟಿ ಕಾರ್ಯಾಚರಣೆ ನಡೆಸಿ ,ಅಂಗಡಿಗಳ ಮೇಲೆ ದಾಳಿ ನಡೆಸಿದ್ರು. ಯಶವಂತಪುರ ಎಪಿಎಂಸಿ ಯಾರ್ಡ್, ಮಡಿವಾಳ, ತಾವರೆಕೆರೆ ಸೇರಿದಂತೆ ಹಲವು ಅಂಗಡಿಗಳ ಮೇಲೆ ಅಧಿಕಾರಿಗಳು ದಾಳಿ ನಡೆಸಿ, 1500 ಕೆಜಿ ನಿಷೇಧಿತ ಪ್ಲಾಸ್ಟಿಕ್ ವಸ್ತುಗಳನ್ನ ವಶಕ್ಕೆ ಪಡೆದುಕೊಂಡಿದ್ದಾರೆ.

ನಿಷೇಧಿತ ಪ್ಲಾಸ್ಟಿಕ್ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ಹಿನ್ನಲೆ ಅಂಗಡಿ ಮಾಲಿಕರಿಂದ 1 ಲಕ್ಷ ರೂಪಾಯಿ ದಂಡ ವಸೂಲಿ ಮಾಡಲಾಗಿದೆ.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗೆ ಸಂಪರ್ಕಿಸಿ: conatct@firstnews.tv