ಹಿರೆಕೆರೂರು ಶಾಸಕ ಬಿ.ಸಿ.ಪಾಟೀಲ್ ಮತದಾನ

ಹಾವೇರಿ: ರಾಜ್ಯದ ಒಟ್ಟು 14 ಲೋಕಸಭಾ ಕ್ಷೇತ್ರಗಳಲ್ಲಿ ಎರಡನೇ ಹಂತದ ಮತದಾನ ನಡೆಯುತ್ತಿದೆ. ಹಿರೆಕೇರೂರು ಶಾಸಕ ಬಿ.ಸಿ.ಪಾಟೀಲ್ ಕುಟುಂಬ ಸಮೇತರಾಗಿ ಮತಗಟ್ಟೆಗೆ ಬಂದು ಮತ ಚಲಾಯಿಸಿದರು. ಹಿರೆಕೆರೂರು ತಾಲೂಕಿನ ಬಾಳಂಬೀಡ ಗ್ರಾಮದ ಮತಗಟೆಗೆ ಪತ್ನಿ ಹಾಗೂ ಮಗಳು ಸೃಷ್ಟಿ ಪಾಟೀಲ್ ಜತೆಗೆ ಆಗಮಿಸಿ, ಬೂತ್ ಸಂಖ್ಯೆ 98 ರಲ್ಲಿ ತಮ್ಮ ಹಕ್ಕು ಚಲಾವಣೆ ಮಾಡಿದರು.  ಹಾವೇರಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶಿವಕುಮಾರ್ ಉದಾಸಿ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಡಿ .ಆರ್ ಪಾಟೀಲ್ ನಡುವೆ ನೇರ ಹಣಾಹಣಿ ಏರ್ಪಟ್ಟಿದೆ.


Follow us on:

YouTube: firstNewsKannada  Instagram: firstnews.tv  Facebook: firstnews.tv  Twitter: firstnews.tv