ಸಚಿವ ಆನಂದ್​ಸಿಂಗ್​ರನ್ನು ಹುಡುಕಿಕೊಡಿ..!

ಬಳ್ಳಾರಿ: ಚುನಾವಣಾ ಫಲಿತಾಂಶ ಬಂದಾಗಿನಿಂದ ವಿಜಯನಗರ ಹೊಸಪೇಟೆ ಶಾಸಕ ಆನಂದ್ ಸಿಂಗ್ ಕಾಣೆಯಾಗಿದ್ದಾರೆ. ಅವರನ್ನು ಹುಡುಕಿ ಕೊಡಿ ಅಂತಾ ಹೊಸಪೇಟೆಯ ಕಾಂಗ್ರೆಸ್ ಕಾರ್ಯಕರ್ತರು ಪೊಲೀಸರಿಗೆ ದೂರು ನೀಡಿದ್ದಾರೆ. ಹೊಸಪೇಟೆಯ ಶಾನಭಾಗ ಸರ್ಕಲ್​ನಲ್ಲಿ ಪ್ರತಿಭಟನೆ ನಡೆಸಿದ ಕೈ ಕಾರ್ಯಕರ್ತರು ಸ್ಥಳೀಯ ಪೊಲೀಸ್ ಠಾಣೆಗೆ ತೆರಳಿ ಮಿಸ್ಸಿಂಗ್ ಕೇಸು ದಾಖಲಿಸಿದ್ದಾರೆ. ಶಾಸಕ ಆನಂದ್ ಸಿಂಗ್ ಅವರನ್ನು ಬಿಜೆಪಿ ನಾಯಕರು ಹೈಜಾಕ್ ಮಾಡಿದ್ದಾರೆ ಅಂತಾನೂ ದೂರಿನಲ್ಲಿ ಉಲ್ಲೇಖಿಸಲಾಗಿದೆ.

ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ: contact@firstnews.tv