3 ಜಿಲ್ಲೆಗಳ ಹಾಲು ಒಕ್ಕೂಟ ಚುನಾವಣೆ ಫಲಿತಾಂಶ ಪ್ರಕಟ

ಬಳ್ಳಾರಿ: ಬಳ್ಳಾರಿ, ರಾಯಚೂರು, ಕೊಪ್ಪಳ ಹಾಲು ಒಕ್ಕೂಟ ಚುನಾವಣೆ ಫಲಿತಾಂಶ ಪ್ರಕಟವಾಗಿದೆ. ಏಪ್ರಿಲ್‌ 3 ರಂದು, 12 ನಿರ್ದೇಶಕ ಸ್ಥಾನಗಳಿಗೆ ಚುನಾವಣೆ ನಡೆದಿತ್ತು. ಹಗರಿಬೊಮ್ಮನಹಳ್ಳಿ ಶಾಸಕ ಭೀಮಾನಾಯ್ಕ್ ಸೇರಿದಂತೆ ಕೊಪ್ಪಳ 4, ಬಳ್ಳಾರಿ 4, ರಾಯಚೂರಿನ 4 ಜನ, ಒಟ್ಟು 12 ಜನರು ನಿರ್ದೇಶಕರಾಗಿ ಆಯ್ಕೆಯಾಗಿದ್ರು. ಆದ್ರೆ ನ್ಯಾಯಾಲಯದ ಆದೇಶದ ಹಿನ್ನೆಲೆಯಲ್ಲಿ ತಡೆಹಿಡಿಯಲಾಗಿತ್ತು. ಇಂದು ನ್ಯಾಯಾಲಯದ ತಡೆಯಾಜ್ಞೆ ತೆರವಾದ ಹಿನ್ನೆಲೆ ಬಳ್ಳಾರಿ ಉಪವಿಭಾಗಾಧಿಕಾರಿ ರಮೇಶ ಕೊನರೆಡ್ಡಿ ಫಲಿತಾಂಶ ಪ್ರಕಟ ಮಾಡಿದ್ದಾರೆ.