186 ಅಡಿ ಸಾಮರ್ಥ್ಯದ ಭದ್ರಾ ಜಲಾಶಯದಲ್ಲಿ 118.6 ಅಡಿ ನೀರು ಸಂಗ್ರಹ

ಶಿವಮೊಗ್ಗ: ಈಗಾಗಲೇ ಮುಂಗಾರು ಮಳೆ ಪ್ರವೇಶವಾಗಿದ್ದು, ಈ ಬಾರೀ ರಾಜ್ಯದಲ್ಲಿ ನಿರೀಕ್ಷೆಗೂ ಮೀರಿ ಮಳೆಯಾಗುತ್ತಿದೆ. ಮಲೆನಾಡಿನಲ್ಲಿಯೂ ಭಾರಿ ಪ್ರಮಾಣದಲ್ಲಿ ಮಳೆಯಾಗುತ್ತಿದ್ದು, ಭದ್ರಾವತಿ ತಾಲೂಕಿನ ಭದ್ರಾ ಜಲಾಶಯದ ಒಳ ಹರಿವಿನಲ್ಲಿ ಏರಿಕೆಯಾಗಿದೆ.

ಭದ್ರಾ ಜಲಾಶಯದ ಮಟ್ಟ
13,640 ಕ್ಯೂಸೆಕ್ ಒಳಹರಿವು ಇದ್ದು, ಒಟ್ಟು 186 ಅಡಿ ಸಾಮರ್ಥ್ಯದ ಜಲಾಶಯದಲ್ಲಿ 118.6 ಅಡಿ ನೀರು ಸಂಗ್ರಹವಾಗಿದೆ. ಇನ್ನು ಗಾಜನೂರಿನ ತುಂಗಾ ಜಲಾಶಯಕ್ಕೆ 26,880 ಒಳ ಹರಿವು ಇದೆ. ಡ್ಯಾಂ ಭರ್ತಿಯಾದ ಹಿನ್ನೆಲೆಯಲ್ಲಿ 12 ಕ್ರಸ್ಟ್​​ ಗೇಟ್​ಗಳ ಮೂಲಕ 26,845 ಕ್ಯೂಸೆಕ್ ಪ್ರಮಾಣದ ನೀರನ್ನು ನದಿಯಿಂದ ಹೊರ ಬಿಡಲಾಗಿದೆ.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗಾಗಿ ಸಂಪರ್ಕಿಸಿ: contact@firstnews.tv