ಭದ್ರಾ ಜಲಾಶಯ: ಒಂದೇ ದಿನದಲ್ಲಿ ನಾಲ್ಕು ಅಡಿ ನೀರು ಸಂಗ್ರಹ

ಶಿವಮೊಗ್ಗ: ಜಿಲ್ಲೆಯಲ್ಲಿ ಸತತವಾಗಿ ಸುರಿದ ಭಾರೀ ಮಳೆಗೆ ಜಲಾಶಯಗಳ ನೀರಿನ ಸಂಗ್ರಹದಲ್ಲಿ ಅಧಿಕವಾಗಿದೆ. ಭದ್ರಾವತಿ ತಾಲೂಕಿನ ಭದ್ರಾ ಜಲಾಶಯದ ನೀರಿನ ಮಟ್ಟದಲ್ಲಿ ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ ನಾಲ್ಕು ಅಡಿಯಷ್ಟು ನೀರಿನ ಸಂಗ್ರಹ ಹೆಚ್ಚಾಗಿದೆ.

ಒಟ್ಟು 186 ಅಡಿ ಸಾಮರ್ಥ್ಯದ ಜಲಾಶಯದಲ್ಲಿ 126.5 ಅಡಿ ನೀರು ಸಂಗ್ರಹವಾಗಿದೆ. ಭದ್ರಾ ಜಲಾಶಯದಲ್ಲಿ 21, 968 ಕ್ಯೂಸೆಕ್ ಒಳ ಹರಿವು, 198 ಕ್ಯೂಸೆಕ್ ಹೊರ ಹರಿವು ನೀರಿದೆ. ಇನ್ನೂ ಗಾಜನೂರಿನ ತುಂಗಾ ಜಲಾಶಯದಲ್ಲೂ ಒಳ ಹರಿವು ಹೆಚ್ಚಾಗಿದೆ. ಇನ್ನು, 588.24 ಅಡಿ ಸಾಮರ್ಥ್ಯದ ಗಾಜನೂರಿನ ತುಂಗಾ ಜಲಾಶಯ ಸಂಪೂರ್ಣ ಭರ್ತಿಯಾಗಿದೆ. ತುಂಗಾ ಜಲಾಶಯದ ಒಳ ಹರಿವು 30,007, ಹೊರ ಹರಿವು 30,042 ಕ್ಯೂಸೆಕ್​.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗಾಗಿ ಸಂಪರ್ಕಿಸಿ: contact@firstnews.tv