ಬೈಕ್​​ಗೆ ಕಾರು ಡಿಕ್ಕಿ: ಮೂವರ ಸಾವು

ಗುಬ್ಬಿ: ಬೈಕ್​ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಮೂವರು ಮೃತಪಟ್ಟಿರುವ ಘಟನೆ ಗುಬ್ಬಿ ತಾಲೂಕಿನ ಬೆಣಚಿಗೆರೆ ಗೇಟ್​​ ಬಳಿ ನಡೆದಿದೆ.
ಮೃತಪಟ್ಟವರನ್ನು ಇರ್ಫಾನ್​​ (28), ಅಸ್ಗರ್ (26) ಹಾಗೂ ಸೈಯ್ಯದ್ ಇರ್ಫಾನ್(30) ಎಂದು ಗುರುತಿಸಲಾಗಿದೆ. ನಿಟ್ಟೂರಿನಿಂದ ತುಮಕೂರಿಗೆ ಹೋಗುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಕಾರು ಚಾಲಕ ಅಪಘಾತದ ಬಳಿಕ ಕಾರನ್ನು ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದಾನೆ. ಗುಬ್ಬಿ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.