ರಸ್ತೆ ಅಪಘಾತದಲ್ಲಿ ರಾಜ್ಯ ಮಟ್ಟದ ಕಬಡ್ಡಿ ಆಟಗಾರ ಸಾವು

ದಾವಣಗೆರೆ: ಬೈಕ್​​ಗಳು ಪರಸ್ಪರ ಡಿಕ್ಕಿಯಾಗಿ ರಾಜ್ಯ ಮಟ್ಟದ ಕಬಡ್ಡಿ ಆಟಗಾರ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಹುಲಿಕಟ್ಟಿ ಗ್ರಾಮದ ಬಳಿ ನಡೆದಿದೆ. ಅಖಿಲೇಶ್ (23) ಮೃತ ರಾಜ್ಯ ಮಟ್ಟದ ಕಬಡ್ಡಿ ಆಟಗಾರ. ಎದುರಿಗೆ ಬಂದ ಬೈಕ್ ಅಖಿಲೇಶ್ ಬೈಕ್​ಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.

ಅಖಿಲೇಶ್ ಹರಪನಹಳ್ಳಿ ತಾಲೂಕಿನ ಬಾಪೂಜಿ ನಗರದ ನಿವಾಸಿ. ಕಳೆದ ವರ್ಷ ರಾಜ್ಯ ಕಬಡ್ಡಿ ತಂಡಕ್ಕೆ ಆಯ್ಕೆಯಾಗಿದ್ದರು. ಸದ್ಯ ಹರಪನಹಳ್ಳಿ ಪದವಿ ಕಾಲೇಜ್​ನಲ್ಲಿ ಬಿಎ ಓದುತ್ತಿದ್ದರು. ಹರಪನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗೆ ಸಂಪರ್ಕಿಸಿ: contact@firstnews.tv