ಬೈಕ್​ಗಳ ಮುಖಾಮುಖಿ ಡಿಕ್ಕಿ: ಓರ್ವ ಸಾವು,ಇನ್ನಿಬ್ಬರಿಗೆ ಗಾಯ

ಹಾವೇರಿ: ಎರಡು ಬೈಕ್​ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಸ್ಥಳದಲ್ಲೇ ಓರ್ವ ಸಾವನ್ನಪ್ಪಿ, ಇಬ್ಬರು ಗಂಭೀರ ಗಾಯಗೊಂಡ ಘಟನೆ ಹಿರೆಕೆರೂರು ತಾಲೂಕಿನ ಹೊಲಬಿಕೊಂಡ ಗ್ರಾಮದ ಬಳಿ ನಡೆದಿದೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಕುರಿತಂತೆ ಹಿರೆಕೆರೂರು ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.