ಬೈಕ್​ಗೆ ಲಾರಿ ಡಿಕ್ಕಿ, ಸ್ಥಳದಲ್ಲೇ ಬೈಕ್​ ಸವಾರ ಸಾವು..!

ಬೆಂಗಳೂರು: ಚಲಿಸುತ್ತಿದ್ದ ಬೈಕ್​ಗೆ ಲಾರಿಯೊಂದು ಡಿಕ್ಕಿ ಕೊಟ್ಟಿದ್ದು ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಗುರಗುಂಟೆಪಾಳ್ಯ ರೋಡ್​ನ ಲಗ್ಗೆರೆ ಬ್ರಿಡ್ಜ್ ಬಳಿ ಘಟನೆ ನಡೆದಿದೆ. ಮೃತನನ್ನು ಗಣೇಶ್(28) ಎಂದು ಗುರುತಿಸಲಾಗಿದೆ.
ಅಂತರಹಳ್ಳಿಯಿಂದ ಗೊರಗುಂಟೆಪಾಳ್ಯದ ಕಡೆಗೆ ಹೊರಟಿದ್ದ ಗಣೇಶ್​ಗೆ ಲಾರಿಯೊಂದು ಹಿಂದಿನಿಂದ ಬಂದು ಗುದ್ದಿತ್ತು. ನಿನ್ನೆ ಬೆಳಿಗ್ಗೆ 8.30ರ ವೇಳೆಗೆ ಘಟನೆ ನಡೆದಿದೆ. ನಂದಿನಿ ಲೇಔಟ್ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಲಾರಿ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗೆ ಸಂಪರ್ಕಿಸಿ: contact@firstnews.tv