ಬೈಕ್​ಗೆ ಕಾರು ಡಿಕ್ಕಿ, ಬೈಕ್​ ಸವಾರ ಸಾವು

ಕೋಲಾರ: ಬೈಕ್​ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಆಂಧ್ರ ಮೂಲದ ಕುಪ್ಪಂ ನಿವಾಸಿ ಬೈಕ್ ಸವಾರ ಸತೀಶ್ (35)ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.
ಇಂದು ಮಧ್ಯಾಹ್ನ 3 ಗಂಟೆಗೆ  ಕೆಜಿಎಪ್ ಪಟ್ಟಣದ ಚಾಂಪಿಯನ್ ಬಡಾವಣೆಯ ಟೊರೆಂಟ್ಸ್ ಕ್ರಾಸ್​ನಲ್ಲಿ ಈ ಅವಘಡ ಸಂಭವಿಸಿತ್ತು. ಇದಕ್ಕೆ ಕಾರ್ ಚಾಲಕನ ಅತೀ ವೇಗವೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಗಂಭೀರವಾಗಿ ಗಾಯಗೊಂಡಿದ್ದ ಬೈಕ್ ಸವಾರನನ್ನು ಕುಪ್ಪಂನ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲು ಮಾಡಿದ್ದರು. ಆದ್ರೆ ,ಚಿಕಿತ್ಸೆ ಫಲಕಾರಿಯಾಗದೆ ಸತೀಶ್ ಸಾವನ್ನಪ್ಪಿದ್ದಾರೆ. ಈ ಸಂಬಂಧ ಕೆಜಿಎಪ್​ನ ಚಾಂಪಿಯನ್ ರೀಪ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಕ್ಕಾಗಿ ಸಂಪರ್ಕಿಸಿ: contact@firstnews.t