ಪೊಲೀಸರ ಬಲೆಗೆ ಬಿದ್ದ ಬೈಕ್​ ಕಳ್ಳರು..!

ಕಲಬುರ್ಗಿ: ನಗರದ ವಿವಿಧೆಡೆ ಬೈಕ್ ಕಳ್ಳತನ ಮಾಡಿದ್ದ ಆರೋಪಿಗಳನ್ನು ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಮಹ್ಮದ್ ಇಸ್ಮಾಯಿಲ್, ಮಹ್ಮದ್ ಅಫರೋಜ್, ತಯ್ಯಾಬ್ ಅಲಿ ಬಂಧಿತ ಆರೋಪಿಗಳು. ಬಂಧಿತರಿಂದ 23 ಬೈಕ್​ಗಳನ್ನ ವಶಪಡಿಸಿಕೊಂಡಿದ್ದಾರೆ. ಆಳಂದ ಚೆಕ್​​ಪೋಸ್ಟ್​ನಲ್ಲಿ ವಾಹನ ತಪಾಸಣೆ ಮಾಡುತ್ತಿದ್ದ ಪೊಲೀಸರಿಗೆ ನಂಬರ್ ಪ್ಲೇಟ್ ಇಲ್ಲದೇ ಬೈಕ್ ಮೇಲೆ ಬರುತ್ತಿದ್ದ ಇಬ್ಬರನ್ನು ಹಿಡಿದಿದ್ದಾರೆ. ವಿಚಾರಣೆ ನಡೆಸಿದ ವೇಳೆ ಆರೋಪಿಗಳು ಬೈಕ್​ ಕಳ್ಳತನದ ಬಗ್ಗೆ ಬಾಯ್ಬಿಟ್ಟಿದ್ದಾರೆ.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗೆ ಸಂಪರ್ಕಿಸಿ:contact@firstnews.tv