ಬೈಕ್‌ ಕಳ್ಳನಿಗೆ ಸಾರ್ವಜನಿಕರಿಂದ ಧರ್ಮದೇಟು

ದಾವಣಗೆರೆ: ಬೈಕ್ ಕಳ್ಳತನಕ್ಕೆ ಯತ್ನಿಸುತ್ತಿದ್ದ ಖದೀಮನಿಗೆ ಸಾರ್ವಜನಿಕರು ಧರ್ಮದೇಟು ನೀಡಿ, ಪೊಲೀಸರಿಗೆ ಒಪ್ಪಿಸಿದ ಘಟನೆ ಚನ್ನಗಿರಿ ತಾಲೂಕಿನ ಕೆರೆಬಿಳಚಿ ಗ್ರಾಮದ ಬಳಿಯ ಸೂಳೆಕೆರೆಯಲ್ಲಿ ನಡೆದಿದೆ. ಬೆಂಗಳೂರು ‌ನಿವಾಸಿ ವೀರಭದ್ರಪ್ಪ (53) ಧರ್ಮದೇಟು ತಿಂದ ಬೈಕ್ ಕಳ್ಳ. ನವವಿವಾಹಿತ ಜೋಡಿ ಬೈಕ್ ನಿಲ್ಲಿಸಿ ಕೆರೆ ವೀಕ್ಷಿಸಲು ಬಂದಿದ್ದರು. ಈ ವೇಳೆ ನಕಲಿ ಕೀ ಬಳಸಿ ಕಳ್ಳ ಬೈಕ್ ಕದಿಯಲು ಯತ್ನಿಸುತ್ತಿದ್ದ. ಇದನ್ನ ಗಮನಿಸಿ ಸಾರ್ವಜನಿಕರು ಕಳ್ಳನಿಗೆ ಧರ್ಮದೇಟು ನೀಡಿದ್ದಾರೆ. ಬಳಿಕ ಸಂತೆಬೆನ್ನೂರು‌ ಪೊಲೀಸರಿಗೆ ಆತನನ್ನು ಒಪ್ಪಿಸಿದ್ದಾರೆ. ಆರೋಪಿ ಕೊಲೆ‌ ಪ್ರಕರಣವೊಂದರಲ್ಲಿ ಜೈಲಿನಲ್ಲಿದ್ದ. ಜೈಲಿನಿಂದ ಬಿಡುಗಡೆ ಆದ ಬಳಿಕ ಬೈಕ್ ಕಳ್ಳತನಕ್ಕೆ ಇಳಿದಿದ್ದ ಎನ್ನಲಾಗಿದೆ.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗೆ ಸಂಪರ್ಕಿಸಿ: contact@firstnews.tv