ಪ್ರಚಾರಕ್ಕೆ ತೆರಳಿದ ಕೈ ಅಭ್ಯರ್ಥಿಯ ಭಾಷಣಕ್ಕೆ ಬಿಜೆಪಿ ಕಾರ್ಯಕರ್ತರಿಂದ ಅಡ್ಡಿ

ಬಳ್ಳಾರಿ: ಪ್ರಚಾರದ ವೇಳೆ ಹಗರಿಬೊಮ್ಮನಹಳ್ಳಿ ಕಾಂಗ್ರೆಸ್​ ಅಭ್ಯರ್ಥಿ ಭೀಮನಾಯ್ಕಗೆ ಮುಜುಗರವುಂಟಾದ ಘಟನೆ ನಡೆದಿದೆ. ಹಗರಿಬೊಮ್ಮನಹಳ್ಳಿ ತಾಲೂಕಿನ ಕಡಲಬಾಳು ಗ್ರಾಮದಲ್ಲಿ ನಿನ್ನೆ ರಾತ್ರಿ ಪ್ರಚಾರಕ್ಕೆ ಹೋದ ವೇಳೆ ಬಿಜೆಪಿ ಕಾರ್ಯಕರ್ತರು ಮೋದಿ, ಮೋದಿ ಎಂದು ಕೂಗಿದ್ದಾರೆ. ಅಷ್ಟೇ ಅಲ್ಲದೇ ಭೀಮನಾಯ್ಕ ಭಾಷಣಕ್ಕೆ ಅಡ್ಡಿಪಡಿಸಿದ್ದಾರೆ ಎನ್ನಲಾಗಿದೆ. ಇದರಿಂದಾಗಿ ಭೀಮನಾಯ್ಕ ಭಾಷಣ ಅರ್ಧಕ್ಕೆ ಮೊಟಕುಗೊಳಿಸಿ ಸ್ಥಳದಿಂದ ಹೊರಟು ಹೋಗಿದ್ದಾರೆ. ಕ್ಷೇತ್ರದ ಅಂಕಸಮುದ್ರ ಗ್ರಾಮದಲ್ಲೂ ಭೀಮನಾಯ್ಕರೊಂದಿಗೆ ಸ್ಥಳೀಯರು ಮಾತಿನ ಚಕಮಕಿ ನಡೆಸಿದ್ದಾರೆ ಎನ್ನಲಾಗಿದೆ.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಕ್ಕಾಗಿ ಸಂಪರ್ಕಿಸಿ: contact@firstnews.tv