‘ಕೈ’ ಪರ ಪ್ರಚಾರ ಮಾಡಿದ್ದಕ್ಕೆ ಬಿಜೆಪಿ ಕಾರ್ಯಕರ್ತರಿಂದ ಹಲ್ಲೆ ಆರೋಪ

ಕಲಬುರ್ಗಿ: ಆಳಂದ ತಾಲೂಕಿನ‌ ತಡಕಲ್ ಗ್ರಾಮದಲ್ಲಿ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪರ ಪ್ರಚಾರ ಮಾಡಿದ್ದಕ್ಕೆ ಯುವಕನೊಬ್ಬನ ಮೇಲೆ ಬಿಜೆಪಿ ಕಾರ್ಯಕರ್ತರು ಹಲ್ಲೆ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.
ಮಹೇಶ್ ಮದನಕರ್ (22) ಹಲ್ಲೆಗೊಳಗಾದ ಯುವಕ. ಘಟನೆಯಲ್ಲಿ ಮಹೇಶ್​ ತಲೆಗೆ ಗಂಭೀರ ಗಾಯವಾಗಿದ್ದು, ಕಲಬುರ್ಗಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ತಡಕಲ್ ಗ್ರಾಮದ ರಾಜು ಹಾಗೂ ತಿಪ್ಪಣ್ಣ ಎಂಬುವರು ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ. ಈ ಸಂಬಂಧ ಆಳಂದ‌ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗಾಗಿ ಸಂಪರ್ಕಿಸಿ: contact@firstnews.tv