ಬಿಜೆಪಿ ಉಪಾಧ್ಯಕ್ಷರಾಗಿ ಮೂವರು ಮಾಜಿ ಸಿಎಂಗಳ ನೇಮಕ

ನವದೆಹಲಿ: ಮುಂದಿನ ಲೋಕಸಭಾ ಚುನಾವಣೆಗೆ ಬಿಜೆಪಿ ಭಾರೀ ತಂತ್ರಗಳನ್ನು ರೂಪಿಸುತ್ತಿದೆ. ಇದಕ್ಕಾಗಿ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ. ಪಂಚರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಮೂರು ರಾಜ್ಯಗಳಲ್ಲಿ ಸೋತಿರೋ ಬಿಜೆಪಿ, ಆ ರಾಜ್ಯಗಳತ್ತ ಹೆಚ್ಚು ಗಮನ ಹರಿಸಿದೆ.
ಮಧ್ಯಪ್ರದೇಶ ಮಾಜಿ ಸಿಎಂ ಶಿವರಾಜ್ ಸಿಂಗ್ ಚೌವ್ಹಾಣ್‌, ರಾಜಸ್ಥಾನ ಮಾಜಿ ಮುಖ್ಯಮಂತ್ರಿ ವಸುಂಧರಾ ರಾಜೆ, ಛತ್ತೀಸ್‌ಗಢದ ಮಾಜಿ ಸಿಎಂ ರಮಣ್‌ ಸಿಂಗ್ ಈ ಮೂವರು ಪವರ್‌ಫುಲ್‌ ನಾಯಕರನ್ನು ಬಿಜೆಪಿಯ ರಾಷ್ಟ್ರೀಯ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಈ ಬಗ್ಗೆ ಬಿಜೆಪಿಯ ಕಾರ್ಯದರ್ಶಿ ಅರುಣ್‌ ಸಿಂಗ್, ಟ್ವೀಟ್ ಮೂಲಕ ನೇಮಕ ಮಾಡಿರುವ ಬಗ್ಗೆ ತಿಳಿಸಿದ್ದಾರೆ. ಈ ಮೂಲಕ ಬಿಜೆಪಿ ಸಾರ್ವತ್ರಿಕ ಚುನಾವಣೆಯಲ್ಲಿ ಪಕ್ಷವನ್ನು ಬಲಪಡಿಸಲು ಕಾರ್ಯತಂತ್ರ ಹೆಣೆಯುತ್ತಿದೆ.