ಬಿಸಿಲ ನಾಡಿಗೆ ತಟ್ಟಿಲ್ಲ ಬಂದ್​ನ ಬಿಸಿ

ರಾಯಚೂರು: ರೈತರ ಸಾಲಮನ್ನಾಕ್ಕೆ ಆಗ್ರಹಿಸಿ ಬಿಜೆಪಿ ನೀಡಿರುವ ಕರ್ನಾಟಕ ಬಂದ್​ಗೆ ಬಿಸಿಲ ನಾಡು ರಾಯಚೂರಿನಲ್ಲಿ ಬೆಂಬಲ ವ್ಯಕ್ತವಾಗಿಲ್ಲ. ನಗರದಲ್ಲಿ ಎಂದಿನಂತೆ ಬಸ್​ ಸಂಚಾರ ಮತ್ತು ಜನಜೀವನ ಸಹಜವಾಗಿದ್ದು. ಸರ್ಕಾರಿ ಕಚೇರಿಗಳು ಎಂದಿನಂತೆ ಕಾರ್ಯನಿರ್ವಹಿಸಲಿವೆ ಎಂದು ತಿಳಿದುಬಂದಿದೆ. ಶಾಲಾ ಕಾಲೇಜುಗಳಿಗೆ ರಜೆ ಇಲ್ಲ. ಬಂದ್​ಗೆ ಕನ್ನಡಪರ ಮತ್ತು ರೈತ ಸಂಘಟನೆಗಳು ಬೆಂಬಲ ನೀಡದ ಕಾರಣ ನೀರಸ ಪ್ರಕ್ರಿಯೆ ವ್ಯಕ್ತವಾಗಿದೆ.