ಬಲವಂತವಾಗಿ ಅಂಗಡಿ, ಮುಂಗಟ್ಟು ಬಂದ್​ ಮಾಡಿಸುತ್ತಿರುವ ಕಾರ್ಯಕರ್ತರು

ರಾಯಚೂರು: ರೈತರ ಸಾಲ ಮನ್ನಾಗೆ ಆಗ್ರಹಿಸಿ ಕರೆ ನೀಡಲಾಗಿರೋ ಬಂದ್​ ಹಿನ್ನೆಲೆಯಲ್ಲಿ ಶಾಸಕ ಶಿವರಾಜ್ ಪಾಟೀಲ್ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ನಗರದ ಪಟೇಲ್ ರಸ್ತೆಯಲ್ಲಿರುವ ಅಂಗಡಿ ಮುಂಗಟ್ಟುಗಳನ್ನು ಒತ್ತಾಯಪೂರ್ವಕವಾಗಿ ಬಂದ್ ಮಾಡಿಸುತ್ತಿದ್ದಾರೆ. ಪೊಲೀಸರ ಸಮ್ಮುಖದಲ್ಲೇ ಅಂಗಡಿಗಳನ್ನು ಬಂದ್ ಮಾಡಿಸಲಾಗುತ್ತಿದೆ. ಕಾರ್ಯಕರ್ತರು ರಸ್ತೆಗಿಳಿದು ಪ್ರತಿಭಟನೆ ನಡೆಸುತ್ತಿದ್ದು, ನಗರದ ಪಟೇಲ್ ರಸ್ತೆ ಮೂಲಕ ಪ್ರತಿಭಟನಾ ಮೆರವಣಿಗೆ ನಡೆಯಲಿದೆ.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಕ್ಕಾಗಿ ಸಂಪರ್ಕಿಸಿ: contact@firstnews.tv