ಕುಟುಂಬ ಸಮೇತ ಆಗಮಿಸಿ ಬಿಜೆಪಿ ಅಭ್ಯರ್ಥಿ ಪ್ರಹ್ಲಾದ್ ಜೋಷಿ ಮತದಾನ

ಹುಬ್ಬಳ್ಳಿ: ರಾಜ್ಯದ 14 ಲೋಕಸಭಾ ಕ್ಷೇತ್ರಗಳಲ್ಲಿ ಇಂದು ಎರಡನೇ ಹಂತದ ಮತದಾನ ನಡೆಯುತ್ತಿದೆ. ಬೆಳಿಗ್ಗೆ 7 ಗಂಟೆಯಿದಂಲೇ ಮತದಾರರು ಸರದಿ ಸಾಲಿನಲ್ಲಿ ನಿಂತು ಮತ ಚಲಾಯಿಸುತ್ತಿದ್ದಾರೆ. ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಬಿಜೆಪಿ ಅಭ್ಯರ್ಥಿ ಪ್ರಹ್ಲಾದ್ ಜೋಶಿ ತಮ್ಮ ಹಕ್ಕು ಚಲಾವಣೆ ಮಾಡಿದರು. ವಿವೇಕಾನಂದ ನಗರದ ರೋಟರಿ ಕಿವುಡ ಮಕ್ಕಳ ಶಾಲೆಯ ಬೂತ್‌ ಸಂಖ್ಯೆ 113 ರಲ್ಲಿ ಮತ ಚಾಲಾವಣೆ ಮಾಡಿದರು. ಈ ವೇಳೆ ಜೋಷಿ ಅವರ ಪತ್ನಿ, ಇಬ್ಬರು ಮಕ್ಕಳು ಹಾಗೂ ಸಹೋದರರು ಸಾಥ್​ ನೀಡಿದ್ರು. ಧಾರವಾಡ ಲೋಕಸಭಾ ಕ್ಷೇತ್ರದಿಂದ ಮೈತ್ರಿ ಅಭ್ಯರ್ಥಿಯಾಗಿ ವಿನಯ ಕುಲಕರ್ಣಿ ಹಾಗೂ ಬಿಜೆಪಿ ಅಭ್ಯರ್ಥಿಯಾಗಿ ಪ್ರಹ್ಲಾದ್ ಜೋಷಿ ಕಣದಲ್ಲಿದ್ದಾರೆ.

Follow us on:

YouTube: firstNewsKannada  Instagram: firstnews.tv  Facebook: firstnews.tv  Twitter: firstnews.tv