ಅಸೆಂಬ್ಲಿ ಉಪ ಚುನಾವಣೆ ಬಿಜೆಪಿ ಅಭ್ಯರ್ಥಿಗಳ ಘೋಷಣೆ

ಬೆಂಗಳೂರು: ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳಿಗೆ ಮೇ 19 ರಂದು ಉಪ-ಚುನಾವಣೆ ನಡೆಯಲಿದೆ. ಚಿಂಚೋಳಿ ಹಾಗೂ ಕುಂದಗೋಳ ಕ್ಷೇತ್ರಗಳಲ್ಲಿ ಉಪ ಚುನಾವಣೆ ನಡೆಯಲಿದ್ದು, ಈ ಎರಡು ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿಗಳ ಹೆಸರು ಘೋಷಣೆ ಮಾಡಿದೆ. ಚಿಂಚೋಳಿ ಕ್ಷೇತ್ರಕ್ಕೆ ಅವಿನಾಶ್ ಜಾಧವ್ ಹಾಗೂ ಕುಂದಗೋಳ ಕ್ಷೇತ್ರಕ್ಕೆ ಎಸ್.ಐ. ಚಿಕ್ಕನಗೌಡರ್ ಅವರನ್ನ ಅಖಾಡಕ್ಕಿಳಿಸಿದೆ. ಬಿಜೆಪಿಯ ಕೇಂದ್ರ ಚುನಾವಣಾ ಕಾರ್ಯದರ್ಶಿ ಜೆ.ಪಿ.ನಡ್ಡಾ ಇಂದು ಅಧಿಕೃತ ಅಭ್ಯರ್ಥಿಗಳ ಪಟ್ಟಿಯನ್ನ ಘೋಷಿಸಿದ್ದಾರೆ.


Follow us on:

YouTube: firstNewsKannada  Instagram: firstnews.tv  FaceBook: firstnews.tv  Twitter: firstnews.tv