ದಾವಣಗೆರೆಯಲ್ಲಿ ಬಿಜೆಪಿಯ ಅಭಿನಂದನಾ ಕಾರ್ಯಕ್ರಮ

ದಾವಣಗೆರೆ: ದಾವಣಗೆರೆ ಉತ್ತರ ವಿಧಾನ ಸಭಾ ಕ್ಷೇತ್ರದ ಮತದಾರರು, ಕಾರ್ಯಕರ್ತರಿಗೆ ಬಿಜೆಪಿ ವತಿಯಿಂದ ಅಭಿನಂದನಾ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಶಾಮನೂರು ಶಿವಶಂಕರಪ್ಪ-ಪಾರ್ವತಮ್ಮ ಕಲ್ಯಾಣ ಮಂಟಪದಲ್ಲಿ ನಡೆದ ಸಮಾರಂಭದಲ್ಲಿ, ಸಂಸದ ಜಿ.ಎಂ. ಸಿದ್ದೇಶ್ವರ್, ನೂತನ ಶಾಸಕ ಎಸ್. ಎ. ರವಿಂದ್ರನಾಥ್ , ವಿಧಾನ ಪರಿಷತ್ ಮಾಜಿ ಮುಖ್ಯ ಸಚೇತಕ ಶಿವಯೋಗಿ ಸ್ವಾಮಿ ಭಾಗಿಯಾಗಿದ್ದರು. ಸಂಸದ ಜಿ.ಎಂ.ಸಿದ್ದೇಶ್ವರ್ ಮತ್ತು ಶಾಸಕ ಎಸ್.ಎ. ರವಿಂದ್ರನಾಥ್ ಕಾರ್ಯಕ್ರಮ ಉದ್ಘಾಟನೆ ಮಾಡಿದ್ದು, ಇಬ್ಬರೂ ನಾಯಕರು ತಮ್ಮ ಮುನಿಸು ಬಿಟ್ಟು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ರು. ಕಾಂಗ್ರೆಸ್ ಪ್ರಭಾವಿ ನಾಯಕ ಎಸ್.ಎಸ್.ಮಲ್ಲಿಕಾರ್ಜುನ್ ಅವರನ್ನು ಸೋಲಿಸಿ ಜಯಶಾಲಿಯಾಗಿದ್ದಾರೆ ಎಂಬ ಹೆಮ್ಮೆ ಎಸ್.ಎ.ರವೀಂಧ್ರನಾಥ್ ಅವರದ್ದಾಗಿದೆ.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಕ್ಕಾಗಿ ಸಂಪರ್ಕಿಸಿ: contact@firstnews.tv