ಕಾಶ್ಮೀರದಲ್ಲಿ ಮತ್ತೆ ಸರ್ಕಾರ ರಚಿಸಲು ಬಿಜೆಪಿಗೆ ನೈತಿಕತೆ ಇಲ್ಲ:ಖರ್ಗೆ

ಕಲಬುರ್ಗಿ: ಜಮ್ಮು-ಕಾಶ್ಮೀರದಲ್ಲಿ ಮತ್ತೊಮ್ಮೆ ಸರ್ಕಾರ ರಚನೆ ಮಾಡಲು ಬಿಜೆಪಿಗೆ ಯಾವುದೇ ನೈತಿಕತೆ ಇಲ್ಲ ಅಂತಾ ಲೋಕಸಭೆ ಕಾಂಗ್ರೆಸ್‌ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ಕಲಬುರಗಿಯಲ್ಲಿ ಮಾತನಾಡಿದ ಅವರು, ಈ ಹಿಂದೆ ಇದ್ದ ಬಿಜೆಪಿ ಮತ್ತು ಪಿಡಿಪಿ ಪಕ್ಷಗಳ ಮೈತ್ರಿ ಸರ್ಕಾರ, ಮೈತ್ರಿ ವೈಫಲ್ಯದಿಂದ ಪಥನಗೊಂಡಿತ್ತು. ಅಲ್ಲದೇ ಸದ್ಯ ಕಾಶ್ಮೀರದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಲಾಗಿದೆ. ಇಷ್ಟಾದ ನಂತರವೂ ಬಿಜೆಪಿ ಮತ್ತೆ ಸರ್ಕಾರ ರಚನೆ ಮಾಡುವ ಕಸರತ್ತು ಮಾಡುತ್ತಿದೆ. ಮುಂದಿನ ಚುನಾವಣೆ ದೃಷ್ಟಿಯಲ್ಲಿಟ್ಟುಕೊಂಡು ಬಿಜೆಪಿ ಈ ರೀತಿ ನಾಟಕವಾಡುತ್ತಿದೆ. ಆದರೆ ಇದರಲ್ಲಿ ಬಿಜೆಪಿ ಯಾವುದೇ ಯಶಸ್ಸು ಕಾಣುವುದಿಲ್ಲ ಅಂತಾ ಮಲ್ಲಿಕಾರ್ಜುನ ಖರ್ಗೆ ಹೇಳಿದರು.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗೆ ಸಂಪರ್ಕಿಸಿ: contact@firstnews.tv