ಅಂಗಡಿ, ಹೋಟೆಲ್​ಗಳನ್ನ ಬಲವಂತವಾಗಿ ಮುಚ್ಚಿಸಿ ಪ್ರತಿಭಟನೆ

ಯಾದಗಿರಿ: ಸಾಲಮನ್ನಾಗೆ ಆಗ್ರಹಿಸಿ ಬಿಜೆಪಿ ಕರೆ ಕೊಟ್ಟಿರುವ ಕರ್ನಾಟಕ ಬಂದ್​ಗೆ ರಾಜ್ಯದ ವಿವಿದೆಢೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಕಾರ್ಯಕರ್ತರು ಅಂಗಡಿ ಮುಂಗಟ್ಟುಗಳನ್ನು ಬಲವಂತವಾಗಿ ಮುಚ್ಚಿಸುತ್ತಿದ್ದಾರೆ. ಯಾದಗಿರಿಯಲ್ಲೂ ಬಿಜೆಪಿ ಕಾರ್ಯಕರ್ತರು ಅಂಗಡಿ, ಮುಂಗಟ್ಟುಗಳನ್ನು ಮುಚ್ಚುವಂತೆ ವ್ಯಾಪಾರಿಗಳಿಗೆ ಒತ್ತಾಯಿಸಿದ ಘಟನೆ ನಡೆದಿದೆ. ಶಾಲಾ ಕಾಲೇಜುಗಳಿಗೂ ಬಿಜೆಪಿ ಕಾರ್ಯಕರ್ತರು ಭೇಟಿ ನೀಡಿದ್ದರು. ಪದವಿ ಪರೀಕ್ಷೆ ನಡೆಯುತ್ತಿದ್ದ ಕಾರಣ ವಾಪಸ್ಸಾಗಿದ್ದಾರೆ. ನಗರದಲ್ಲಿ ಬಿಜೆಪಿ ಕಾರ್ಯಕರ್ತರು ಬೈಕ್​ ರ್ಯಾಲಿ ನಡೆಸುವ ಮೂಲಕ ಸಾಲಮನ್ನಾಕ್ಕೆ ಒತ್ತಾಯಿಸಿದರು.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಕ್ಕಾಗಿ ಸಂಪರ್ಕಿಸಿ: contact@firstnews.tv