ಕುಮಾರಸ್ವಾಮಿ ಸಿಎಂ ಆಗಿ ಕೆಲಸ ಮಾಡ್ಬೇಕು, ನಿಖಿಲ್​ ತಂದೆಯಾಗಿ ಅಲ್ಲ: ಮಾಳವಿಕ

ಹುಬ್ಬಳ್ಳಿ: ಮುಖ್ಯಮಂತ್ರಿ ಹೆಚ್‌.ಡಿ.ಕುಮಾರಸ್ವಾಮಿಯವರು ಸಿಎಂ ಆಗಿ ಕೆಲಸ ಮಾಡಬೇಕು. ನಿಖಿಲ್ ಕುಮಾರಸ್ವಾಮಿಯವರ ತಂದೆಯಾಗಿ ಕೆಲಸ ಮಾಡಬಾರದು ಅಂತಾ ಬಿಜೆಪಿ ಸ್ಟಾರ್ ಪ್ರಚಾರಕಿ ಮಾಳವಿಕ ಅವಿನಾಶ್ ಹೇಳಿದ್ದಾರೆ.

ಹುಬ್ಬಳ್ಳಿಯ ಪಕ್ಷದ ಕಚೇರಿಯಲ್ಲಿ ಮಾತನಾಡಿದ ಅವರು, ಮಂಡ್ಯ ಸೇರಿ ರಾಜ್ಯದಲ್ಲಿ ಚುನಾವಣೆಯ ರಾಜಕೀಯ ಸಂಭಾಷಣೆ ಮೌಲ್ಯ ಕುಸಿಯುತ್ತಿದೆ. ಮಂಡ್ಯ ಪಕ್ಷೇತರ ಅಭ್ಯರ್ಥಿ ಸಮಲತಾ ಅಂಬರೀಶ್ ಅವರನ್ನು ನೈತಿಕವಾಗಿ ಕುಗ್ಗಿಸುವ ಕೆಲಸ ನಡೆಯುತ್ತಿದೆ, ಇದು ಸರಿಯಲ್ಲ ಎಂದರು. ಪ್ರಜಾತಂತ್ರ ವ್ಯವಸ್ಥೆಯಲ್ಲಿ ಎಲ್ಲರಿಗೂ ಸ್ಪರ್ಧೆ ಮಾಡುವ ಹಕ್ಕಿದೆ. ಅಭ್ಯರ್ಥಿಗಳ ನಡುವೆ ವೈಯಕ್ತಿಕ ಟೀಕೆಗಳು ಸರಿಯಲ್ಲ ಎಂದು ಹೇಳಿದ್ರು.

ಇನ್ನು ಸಂಸದ ಪ್ರಹ್ಲಾದ್ ಜೋಶಿಯವರು ಅವಳಿ ನಗರಕ್ಕೆ ಹತ್ತು ಹಲವು ಕಾರ್ಯಗಳನ್ನು ನೀಡಿದ್ದಾರೆ. ಜೋಶಿಯವರ ವಿರುದ್ಧ ಸ್ಪರ್ಧೆ ಮಾಡಿದ ಕಾಂಗ್ರೆಸ್​​ನ ವಿನಯ್ ಕುಲಕರ್ಣಿ ವಿರುದ್ಧ ಕೊಲೆಯೊಂದರ ಸಾಕ್ಷ್ಯ ನಾಶ ಆರೋಪ ಕೇಳಿಬಂದಿದೆ. ಬಿಜೆಪಿ  ಜಿಲ್ಲಾ ಪಂಚಾಯತ್​ ಸದಸ್ಯ ಯೋಗೇಶ್​ ಗೌಡ ಕೊಲೆ ನಡೆದಿತ್ತು. ಅದೇ ಕೊಲೆಯ ಸಾಕ್ಷ್ಯ ನಾಶ ಆರೋಪ ಈಗಿನ ಧಾರವಾಡ ಲೋಕಸಭಾ ಕೈ ಅಭ್ಯರ್ಥಿ ಮೇಲೆ ಕೇಳಿಬಂದಿದೆ. ಧಾರವಾಡ ನ್ಯಾಯಾಲಯ ಈ ಕುರಿತು ಎಫ್​ಐಆರ್ ದಾಖಲಿಸಿಕೊಂಡು ತನಿಖೆಗೆ ಆದೇಶ ಮಾಡಿದೆ.ತಮ್ಮ ಅಭ್ಯರ್ಥಿಯ ಪೂರ್ವಾಪರ ತಿಳಿಯದೆ ಹೇಗೆ ಟಿಕೆಟ್ ನೀಡಿದರು ಎಂಬ ಬಗ್ಗೆ ರಾಹುಲ್ ಗಾಂಧಿ ಸ್ಪಷ್ಟನೆ ನೀಡಬೇಕು ಎಂದು ಹೇಳಿದರು.ಇದಕ್ಕೆ ಕಾಂಗ್ರೆಸ್ ಹೈ ಕಮಾಂಡ್ ಏನು ಹೇಳುತ್ತೆ ಅಂತಾನೂ ‌ಪ್ರಶ್ನಿಸಿದ್ರು.

ಪ್ರಧಾನಿ ನರೇಂದ್ರ ಮೋದಿಯವರು ಐದು ವರ್ಷದಲ್ಲಿ ಭ್ರಷ್ಟಾಚಾರ ಮುಕ್ತ ಆಡಳಿತ ನೀಡಿದ್ದಾರೆ. ಮೋದಿ ಹಾಗೂ ಪ್ರಹ್ಲಾದ್ ಜೋಶಿ ಪರ ಪ್ರಚಾರ ಮಾಡುವುದಕ್ಕೆ ನನಗೆ ಹೆಮ್ಮೆ ಅನ್ನಿಸುತ್ತೆ. ಮತ್ತೊಮ್ಮೆ ಮೋದಿ ಅವರನ್ನು ಪ್ರಧಾನಿ ಮಾಡಲು ನಾವು ಈಗ ಮತ ಕೇಳುತ್ತಿದ್ದೇವೆ. ಕಾಂಗ್ರೆಸ್ ಪಕ್ಷ ಕಳೆದ ಎರಡು ದಿನಗಳ ಹಿಂದೆ ಪ್ರಣಾಳಿಕೆ ಬಿಡುಗಡೆ ಮಾಡಿದೆ. ಅವರದು ಘೋಷಣಾ ಪತ್ರ, ನಮ್ಮದು ಸಂಕಲ್ಪ ಪತ್ರ ಅಂತಾ ಕಾಂಗ್ರೆಸ್ ಪ್ರಣಾಳಿಕೆಯನ್ನ ಟೀಕಿಸಿದರು.


Follow us on:

YouTube: firstNewsKannada  Instagram: firstnews.tv  FaceBook: firstnews.tv  Twitter: firstnews.tv