ಯುವ ದಸರಾ ಕಾರ್ಯಕ್ರಮ ಬಹಿಷ್ಕರಿಸಿದ ಬಿಜೆಪಿ ಶಾಸಕ..!

ಮೈಸೂರು: ಮೈಸೂರು ದಸರಾ ಮಹೋತ್ಸವ ಎಲ್ಲರನ್ನು ಮನಸೂರೆಗೊಳಿಸುತ್ತಿದೆ. ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಇಂದು ಯುವ ದಸರಾ ಕಾರ್ಯಕ್ರಮವೂ ಸಂಜೆ 6.30ಕ್ಕೆ ನಿಗದಿಯಾಗಿತ್ತು. ಆದರೆ, ಯುವ ದಸರಾ ಕಾರ್ಯಕ್ರಮದ ಅಧ್ಯಕ್ಷರಾಗಿದ್ದ ಚಾಮರಾಜ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಎಲ್​​. ನಾಗೇಂದ್ರ ಅವರಿಗೆ ಕಾರ್ಯಕ್ರಮದ ಆಹ್ವಾನ ತಡವಾಗಿ ನೀಡಿದ್ದಕ್ಕೆ ಅಸಮಾಧಾನಗೊಂಡರು.

ಇನ್ನು, ಕಾರ್ಯಕ್ರಮದ ಆಹ್ವಾನ ಪತ್ರಿಕೆ ತಡವಾಗಿ ಬಂದಿದ್ದೂ ಅಲ್ಲದೇ, ಕಾರ್ಯಕ್ರಮದ ಬಗ್ಗೆ ಸಮಿತಿ ಕಾರ್ಯದರ್ಶಿ ನಟರಾಜ್​​ಗೆ ಕರೆ ಮಾಡಿ, ಎಸ್​​ಎಂಎಸ್​​ ಕಳುಹಿಸಿದರೂ ಸ್ಪಂದಿಸದ ಹಿನ್ನೆಲೆ ಕಾರ್ಯಕ್ರಮಕ್ಕೆ ತೆರಳದೇ ಬಹಿಷ್ಕಾರ ಹಾಕಿದರು. ಕಾರ್ಯಕ್ರಮದ ಆಹ್ವಾನ ಪತ್ರಿಕೆಯನ್ನು ಒಬ್ಬ ಜನಪ್ರತಿನಿಧಿಗೆ ಕಾರ್ಯಕ್ರಮಕ್ಕೆ ಸಂಬಂಧವಿಲ್ಲದ ವ್ಯಕ್ತಿ ನೀಡಿದ್ದರಿಂದಾಗಿ ಶಾಸಕರು ಬೇಸರ ವ್ಯಕ್ತಪಡಿಸಿದರು. ಅಲ್ಲದೇ ಕಾರ್ಯಕ್ರಮ ಆಹ್ವಾನ ಪತ್ರಿಕೆ ನೀಡುವಲ್ಲಿ ನಿರ್ಲಕ್ಷ್ಯ ತೋರಿದ ಅಧಿಕಾರಿ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಶಾಸಕ ನಾಗೇಂದ್ರ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದಿದ್ದಾರೆ.

 ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗೆ ಸಂಪರ್ಕಿಸಿ: contact@firstnews.tv