ಹುಚ್ಚರಾಯಸ್ವಾಮಿ ದೇವರ ಆಶೀರ್ವಾದ ಪಡೆದು ವೋಟ್ ಮಾಡಿದ ಬಿಎಸ್​ವೈ ಕುಟುಂಬ

ಶಿವಮೊಗ್ಗ: ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್​ ಯಡಿಯೂರಪ್ಪ ಹಾಗೂ ಪುತ್ರ ಬಿ.ವೈ.ರಾಘವೇಂದ್ರ ಇಂದು ಶಿವಮೊಗ್ಗದಲ್ಲಿ ಮತದಾನ ಮಾಡಿದರು. ಮತದಾನಕ್ಕೂ ಮೊದಲು ಬಿಎಸ್​ವೈ, ಪುತ್ರರಾದ ಬಿ.ವೈ.ರಾಘವೇಂದ್ರ, ಬಿ.ವೈ.ವಿಜಯೇಂದ್ರ, ಸೊಸೆಯರಾದ ತೇಜಸ್ವಿನಿ ಮತ್ತು ಪ್ರೇಮ ಹುಚ್ಚರಾಯಸ್ವಾಮಿ ದೇವಸ್ಥಾನ ಮತ್ತು ರಾಘವೇಂದ್ರ ಮಠಕ್ಕೆ ತೆರಳಿ ಪೂಜೆ ಸಲ್ಲಿಸಿದರು. ನಂತರ ತಾಲೂಕು ಆಡಳಿತ ಭವನದ ಮತಗಟ್ಟೆ ಸಂಖ್ಯೆ 134ಕ್ಕೆ ತೆರಳಿ ಮತ ಚಲಾಯಿಸಿದರು. ಈ ಬಾರಿಯೂ ಬಿಎಸ್​ವೈ ಲೋಕಸಭೆ ಚುನಾವಣೆಯಲ್ಲಿ ತಮ್ಮ ಪುತ್ರ ಬಿ.ವೈ ರಾಘವೇಂದ್ರ ಅವರನ್ನ ಕಣಕ್ಕೆ ಇಳಿಸಿದ್ದಾರೆ.

ರಾಜ್ಯದ 14 ಕ್ಷೇತ್ರಗಳಲ್ಲಿ ಚುನಾವಣೆ ನಡೆಯುತ್ತಿದೆ. ನಾನೀಗ ಮತದಾನವನ್ನ ಮಾಡಿ ಬರುತ್ತಿದ್ದೇನೆ. ಮೈತ್ರಿಪಕ್ಷದ ನಾಯಕರು ಕೋಟಿಗಟ್ಟಲೇ ಹಣವನ್ನ ಚುನಾವಣೆಗೆ ಖರ್ಚು ಮಾಡಿದ್ದರೂ ರಾಘವೇಂದ್ರ ಶಿವಮೊಗ್ಗದಲ್ಲಿ ಗೆಲ್ಲುತ್ತಾರೆ. ಒಂದೂವರೆ ಲಕ್ಷಕ್ಕೂ ಹೆಚ್ಚು ಮತಗಳ ಅಂತರದಿಂದ ರಾಘವೇಂದ್ರ ಗೆಲ್ಲುತ್ತಾರೆ. ಕಾಂಗ್ರೆಸ್​ನ ಮಲ್ಲಿಕಾರ್ಜುನ ಖರ್ಗೆ ಆದಿಯಾಗಿ ಎಲ್ಲರೂ ಸೋಲುತ್ತಾರೆ. 14 ಕ್ಷೇತ್ರಗಳಲ್ಲಿ ಬಿಜೆಪಿಯ 12 ಅಭ್ಯರ್ಥಿಗಳು ಗೆಲ್ಲುತ್ತಾರೆ. ರಾಜ್ಯದಲ್ಲಿ 22 ಕ್ಷೇತ್ರಗಳಲ್ಲಿ ಬಿಜೆಪಿ ಪಕ್ಷ ಗೆಲ್ಲುತ್ತದೆ. ರಿಸಲ್ಟ್ ಬಳಿಕ ಕಾಂಗ್ರೆಸ್ ಜೆಡಿಎಸ್​​ನ ಭಿನ್ನಮತ 3 ರಷ್ಟು ಹೆಚ್ಚಾಗುತ್ತದೆ. ಫಲಿತಾಂಶ ಬಳಿಕ ರಾಜ್ಯ ಬಿಜೆಪಿಯಲ್ಲಿ ಬದಲಾವಣೆ ರಾಷ್ಟ್ರೀಯ ನಾಯಕರ ತೀರ್ಮಾನಕ್ಕೆ ಬಿಟ್ಟದ್ದು.

– ಬಿ.ಎಸ್​.ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ


Follow us on:

YouTube: firstNewsKannada  Instagram: firstnews.tv  Facebook: firstnews.tv  Twitter: firstnews.tv