ಸಿಎಂ ದಂಗೆ ಹೇಳಿಕೆ ಖಂಡಿಸಿ ಶಿರಸಿಯಲ್ಲಿ ಬಿಜೆಪಿ ಪ್ರತಿಭಟನೆ

ಶಿರಸಿ: ಸಿಎಂ ಹೆಚ್​.ಡಿ.ಕುಮಾರಸ್ವಾಮಿ ಅವರ ದಂಗೆ ಹೇಳಿಕೆಯನ್ನು ಖಂಡಿಸಿ ಇಂದು ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಅಂಚೆ ವೃತ್ತದಲ್ಲಿ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಸಿಎಂ ವಿರುದ್ಧ ಘೋಷಣೆ ಕೂಗಿದರು.
ಈ ವೇಳೆ ಶಿರಸಿ-ಸಿದ್ದಾಪುರ ಶಾಸಕ ವಿಶ್ವೇಶ್ವರ ಹೆಗಡೆ ಕಾಗೇರಿ, ಕುಮಟಾ ಶಾಸಕ ದಿನಕರ ಶೆಟ್ಟಿ, ಹಳಿಯಾಳ ಮಾಜಿ ಶಾಸಕ ಸುನೀಲ್​ ಹೆಗಡೆ, ಯಲ್ಲಾಪುರ ಮಾಜಿ ಶಾಸಕ ವಿ.ಎಸ್.ಪಾಟೀಲ್ ಹಾಗೂ ಜಿಲ್ಲಾಧ್ಯಕ್ಷ ಕೆ.ಜಿ.ನಾಯ್ಕ ಸೇರಿದಂತೆ ಬಿಜೆಪಿಯ ಹಲವು ಕಾರ್ಯಕರ್ತರು ಭಾಗಿಯಾಗಿದ್ದರು.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗೆ ಸಂಪರ್ಕಿಸಿ: contact@firstnews.tv