ಪ್ರತಿಭಟನೆಯಲ್ಲಿ ತೊಡಗಿದ್ದ ಸಂಸದ, ಶಾಸಕರ ಬಂಧನ

ದಾವಣಗೆರೆ: ಕರ್ನಾಟಕ ಬಂದ್​ ಕರೆ ಹಿನ್ನೆಲೆಯಲ್ಲಿ ನಗರದ ಹಳೇ ಬಸ್ ನಿಲ್ದಾಣದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಬಿಜೆಪಿ ಶಾಸಕರು, ಸಂಸದರು ಸೇರಿದಂತೆ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ರೈತರ ಸಾಲ ಮನ್ನಾ ಮಾಡುವಂತೆ ಒತ್ತಾಯಿಸಿ ಬಿಜೆಪಿ ವತಿ ರಾಜ್ಯಾದ್ಯಂತ ಇಂದು ಪ್ರತಿಭಟನೆ ನಡೆಸುತ್ತಿದೆ. ದಾವಣಗೆರೆಯಲ್ಲೂ ಬಿಜೆಪಿ ಮುಖಂಡರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು. ಪ್ರತಿಭಟನೆಯಲ್ಲಿ ತೊಡಗಿದ್ದ ಸಂಸದ ಜಿ.ಎಂ.ಸಿದ್ದೇಶ್ವರ್, ಶಾಸಕ ರವೀಂದ್ರನಾಥ್​ ಸೇರಿದಂತೆ ಬಿಜೆಪಿ ಮುಖಂಡರನ್ನ ಪೊಲೀಸರು ವಶಕ್ಕೆ ಪಡೆದು ಪ್ರತಿಭಟನೆಯನ್ನು ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಕ್ಕಾಗಿ ಸಂಪರ್ಕಿಸಿ: contact@firstnews.tv