ಸಿಎಂ ದಂಗೆ ಹೇಳಿಕೆ ವಿರುದ್ಧ ಯುವ ಬಿಜೆಪಿ ಪ್ರತಿಭಟನೆ

ರಾಮನಗರ: ಸಿಎಂ ಕುಮಾರಸ್ವಾಮಿ ಜನರಿಗೆ ದಂಗೆ ಏಳಲು ಕರೆ ನೀಡಿರುವುದು ಹಾಗೂ ಯಡ್ಡಿಯೂರಪ್ಪ ಮನೆ ಮೇಲೆ ಕಾಂಗ್ರೆಸ್ ಕಾರ್ಯಕರ್ತರ ದಾಳಿ ಖಂಡಿಸಿ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ರು.
ಸಿಎಂ ರಾಜಕೀಯ ಕರ್ಮಭೂಮಿ‌ ರಾಮನಗರದ ಐಜೂರು ವೃತ್ತದಲ್ಲಿ ಸೇರಿದ ನೂರಾರು ಬಿಜೆಪಿ ಯುವ ಕಾರ್ಯಕರ್ತರು ಬೆಂಗಳೂರು-ಮೈಸೂರು ರಸ್ತೆ ತಡೆದು ಆಕ್ರೋಶ ವ್ಯಕ್ತಪಡಿಸಿದರು. ಇದ್ರಿಂದ ಕೆಲ ಕಾಲ ಹೆದ್ದಾರಿಯಲ್ಲಿ ರಸ್ತೆ ಸಂಚಾರ ಅಸ್ತವ್ಯಸ್ತಗೊಂಡಿತು. ಹೆಚ್‌.ಡಿ‌ ಕುಮಾರಸ್ವಾಮಿ ದಂಗೆ ಮಾಡಿಸುವುದಾಗಿ ಹೇಳಿಕೆ ನೀಡಿರುವುದನ್ನ ಖಂಡಿಸಿದ ಬಿಜೆಪಿ ಕಾರ್ಯಕರ್ತರು, ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಜವಾಬ್ದಾರಿ ಸ್ಥಾನದಲ್ಲಿ ಇದ್ದುಕೊಂಡು ಕ್ಷುಲ್ಲಕ ಕಾರಣಕ್ಕೆ ಜನರನ್ನ ಎತ್ತಿಕಟ್ಟುವ ಕೆಲಸ ಮಾಡ್ತಿದಾರೆ ಎಂದು ಸಿಎಂ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ರು. ಅಪ್ಪ ಕಳ್ಳ, ಮಗ ಮಳ್ಳ ಎಂದು ಘೋಷಣೆ ಕೂಗಿದ್ರು. ಅಲ್ಲದೇ ಅನಾಗರಿಕ ಮುಖ್ಯಮಂತ್ರಿಯನ್ನ ಕಿತ್ತೊಗೆಯಬೇಕು ಎಂದು ಆಗ್ರಹಿಸಿದ್ರು. ನಂತರ ಸಿಎಂ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ತಮ್ಮ ಆಕ್ರೋಶ ಹೊರಹಾಕಿದ್ರು.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗೆ ಸಂಪರ್ಕಿಸಿ: contact@firstnews.tv