ರಾಜ್ಯ ರಾಜಧಾನಿಯಲ್ಲಿ ಮೋದಿ ಸಮಾವೇಶಕ್ಕೆ ಭರ್ಜರಿ ಸಿದ್ಧತೆ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಸಮಾವೇಶಕ್ಕೆ ಸಕಲ ಸಿದ್ಧತೆ ನಡೆಸಲಾಗಿದೆ. ನಗರದ ಪ್ಯಾಲೆಸ್ ಗ್ರೌಂಡ್​ನಲ್ಲಿ ಸಮಾವೇಶ ನಡೆಯಲಿದ್ದು, ಬೆಂಗಳೂರಿನ ನಾಲ್ಕು ಕ್ಷೇತ್ರದ ಬಿಜೆಪಿ ಅಭ್ಯರ್ಥಿಗಳ ಪರ ಪ್ರಧಾನಿ ಮತಯಾಚನೆ ಮಾಡಲಿದ್ದಾರೆ. ಸಮಾವೇಶದಲ್ಲಿ 1 ಲಕ್ಷಕ್ಕೂ ಹೆಚ್ಚು ಜನ ಸೇರುವ ಸಾಧ್ಯತೆ ಇದೆ. ಮೋದಿ ಸಮಾವೇಶಕ್ಕೆ ಬರುವ ಗಣ್ಯ ವ್ಯಕ್ತಿಗಳಿಗೆ ಹಾಗೂ ಸಾರ್ವಜನಿಕರಿಗೆ ಪ್ರತ್ಯೇಕ ಪ್ರವೇಶದ್ವಾರದ ವ್ಯವಸ್ಥೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಪ್ಯಾಲೆಸ್ ಗ್ರೌಂಡ್ ಸುತ್ತಲೂ ಬಿಗಿ ಪೊಲೀಸ್​ ಬಂದೋಬಸ್ತ್ ನಿಯೋಜನೆ ಮಾಡಲಾಗಿದೆ. ಪೊಲೀಸ್​ ಕಮಿಷನರ್ ಸುನಿಲ್ ಕುಮಾರ್ ನೇತೃತ್ವದಲ್ಲಿ 3 ಹೆಚ್ಚುವರಿ ಪೊಲೀಸ್ ಆಯುಕ್ತರು, 8 ಡಿಸಿಪಿ , 15 ಎಸಿಪಿ, 30 ಇನ್ಸ್​ಪೆಕ್ಟರ್, 50 ಪಿಎಸ್ ಐ, 510 ಎಎಸ್ಐ , 15 ಕೆಎಸ್ಆರ್​ಪಿ ತುಕಡಿ ಹಾಗೂ 32 ಮೆಟಲ್ ಡಿಟೆಕ್ಟರ್ 72 ಹ್ಯಾಂಡ್ ಹೋಲ್ಡ್ ಮೆಟಲ್ ಡಿಟೆಕ್ಟರ್. 40 ಸಿಸಿ ಕ್ಯಾಮರಾಗಳನ್ನ ನಿಯೋಜನೆ ಮಾಡಲಾಗಿದೆ. ಇನ್ನು ಅರಮನೆ ಮೈದಾನದಲ್ಲಿ ಸುಮಾರು 87 ಸಾವಿರ ಆಸನ ವ್ಯವಸ್ಥೆ ಮಾಡಲಾಗಿದ್ದು, 10 ಕ್ಕೂ ಹೆಚ್ಚು ಎಲ್ಇಡಿ ಸ್ಕ್ರೀನ್ ವ್ಯವಸ್ಥೆ ಮಾಡಲಾಗಿದೆ.


Follow us on:

YouTube: firstNewsKannada  Instagram: firstnews.tv  FaceBook: firstnews.tv  Twitter: firstnews.tv