ಅಸೆಂಬ್ಲಿ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಹೆಸರು ಹೈಕಮಾಂಡ್​ಗೆ ಶಿಫಾರಸು

ಬೆಂಗಳೂರು: ಡಾ. ಉಮೇಶ್ ಜಾಧವ್ ರಾಜೀನಾಮೆ ಹಾಗೂ ಸಿ.ಎಸ್ ಶಿವಳ್ಳಿ ನಿಧನದಿಂದ ತೆರವಾಗಿದ್ದ ಚಿಂಚೋಳಿ ಹಾಗೂ ಕುಂದಗೋಳ ವಿಧಾನಸಭಾ ಕ್ಷೇತ್ರಗಳ ಶಾಸಕ ಸ್ಥಾನಕ್ಕೆ ಮೇ 19ರಂದು ಉಪಚುನಾವಣೆ ನಡೆಯಲಿದೆ. ಈ ಹಿನ್ನೆಲೆ ಬಿಜೆಪಿ ಹಾಗೂ ಕಾಂಗ್ರೆಸ್​ ಪಕ್ಷಗಳು ತಮ್ಮ ಅಭ್ಯರ್ಥಿ ಹುಡುಕಾಟದಲ್ಲಿ ತೊಡಗಿವೆ. ಈ ನಡುವೆ, ಬಿಜೆಪಿ ತನ್ನ ಕೇಂದ್ರ ಚುನಾವಣಾ ಸಮಿತಿಗೆ ಸಂಭಾವ್ಯ ಅಭ್ಯರ್ಥಿಗಳ ಹೆಸರು ಶಿಫಾರಸ್ಸು ಮಾಡಿದೆ. ಕುಂದಗೋಳ ಕ್ಷೇತ್ರಕ್ಕೆ ಎಂ.ಆರ್.ಪಾಟೀಲ್ ಮತ್ತು ಚಿಕ್ಕನಗೌಡರ್ ಹಾಗೂ ಚಿಂಚೋಳಿ ಕ್ಷೇತ್ರಕ್ಕೆ ಡಾ. ಉಮೇಶ್ ಜಾಧವ್ ಸಹೋದರ ರಾಮಚಂದ್ರ ಜಾಧವ್ ಮತ್ತು ಸುನೀಲ್ ವಲ್ಯಾಪುರೆ ಹೆಸರು ಶಿಫಾರಸ್ಸು ಮಾಡಿದೆ.


Follow us on:

YouTube: firstNewsKannada  Instagram: firstnews.tv  FaceBook: firstnews.tv  Twitter: firstnews.tv