ದಪ್ಪ ಚರ್ಮದ ಸರ್ಕಾರಕ್ಕೆ ಉಪವಾಸ ಸತ್ಯಾಗ್ರಹಗಳು ನಾಟುವುದಿಲ್ಲ: ಬಿಎಸ್​ವೈ ಕಿಡಿ

ಬೆಂಗಳೂರು: ಈ ದಪ್ಪ ಚರ್ಮದ ಸರ್ಕಾರಕ್ಕೆ ಸತ್ಯಾಗ್ರಹಗಳು ನಾಟುವುದಿಲ್ಲ. ನಿಮ್ಮ ಆರೋಗ್ಯ ಕೆಡಿಸಿಕೊಂಡು ಸತ್ಯಾಗ್ರಹ ಮಾಡಬೇಡಿ ಅಂತ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್​ ಯಡಿಯೂರಪ್ಪ ಶಾಸಕ ಎಂ.ಪಿ.ರೇಣುಕಾಚಾರ್ಯ ಅವರಿಗೆ ಹೇಳಿದ್ದಾರೆ.

ಸರ್ಕಾರದ ಮರಳು ನೀತಿ ವಿರೋಧಿಸಿ ದಾವಣಗೆರೆಯ ಹೊನ್ನಾಳಿಯಲ್ಲಿ ಶಾಸಕ ಎಂ.ಪಿ.ರೇಣುಕಾಚಾರ್ಯ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ರೇಣುಕಾಚಾರ್ಯ ಮತ್ತು ಸಾರ್ವಜನಿಕರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ‌.ಎಸ್.ಯಡಿಯೂರಪ್ಪ ಮನವಿ ಮಾಡಿದ್ದಾರೆ. ಜನಪರ ಕಾಳಜಿ ಮತ್ತು ಕ್ಷೇತ್ರದ ಜನರ ಒಳಿತಿಗಾಗಿ ನೀವು ಉಪವಾಸ ಸತ್ಯಾಗ್ರಹ ಮಾಡುತ್ತಿದ್ದೀರಿ. ಈ ದಪ್ಪ ಚರ್ಮದ ಸರ್ಕಾರಕ್ಕೆ ಇಂತಹ ಸತ್ಯಾಗ್ರಹಗಳು ನಾಟುವುದಿಲ್ಲ. ಈಗ ರಾಜ್ಯದಲ್ಲಿರುವುದು ಜನ ವಿರೋಧಿ ಸರ್ಕಾರ. ಈ ಸರ್ಕಾರ ಮರುಳು ಮಾಫಿಯಾ ವಿರುದ್ಧ ಕ್ರಮ ಕೈಗೊಳ್ಳುವ ಮನಸ್ಥಿತಿಯಲ್ಲಿ ಇಲ್ಲ. ಉಪವಾಸ ಸತ್ಯಾಗ್ರಹ ಮಾಡಿ ಸರ್ಕಾರದ ಗಮನ ಸೆಳೆದಿದ್ದೀರಿ. ನಿಮ್ಮ ಆರೋಗ್ಯ ಕೆಡಿಸಿಕೊಂಡು ಸತ್ಯಾಗ್ರಹ ಮಾಡಬೇಡಿ. ಮುಂದಿನ ದಿನಗಳಲ್ಲಿ ನಾವೆಲ್ಲಾ ಒಟ್ಟಿಗೆ ಸೇರಿ ಸರ್ಕಾರದ ವಿರುದ್ಧ ಹೋರಾಟ ಮಾಡೋಣ ಅಂತಾ ಮನವಿ ಮಾಡಿದ್ದಾರೆ.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗೆ ಸಂಪರ್ಕಿಸಿ: contact@firstnews.tv