ನೆಹರು ಓಲೇಕಾರಗೆ ಟಿಕೆಟ್ ನೀಡಿದ್ದಕ್ಕೆ ಅಸಮಾಧಾನ

ಹಾವೇರಿ: ಮಾಜಿ ಶಾಸಕ ನೆಹರು ಓಲೇಕಾರ ಅವರಿಗೆ ಬಿಜೆಪಿ ಟಿಕೆಟ್ ಸಿಕ್ಕ ಹಿನ್ನೆಲೆಯಲ್ಲಿ ಮಾದಿಗ ಸಮುದಾಯದ ಮುಖಂಡರು ಪ್ರತಿಭಟನೆಗೆ ಮುಂದಾಗಿದ್ದಾರೆ. ಮಾಜಿ ಸಚಿವ ಸಿ.ಎಂ.ಉದಾಸಿಯವರ ಭಾರತಿ ನಗರದಲ್ಲಿರುವ ಮನೆಯ ಮುಂದೆ ಪ್ರತಿಭಟನೆ ನಡೆಸಿದ್ದಾರೆ.

ಈ ಹಿಂದೆ ಮಾದಿಗ ಸಮುದಾಯದ ಅಭ್ಯರ್ಥಿಗಳಿಗೆ ಟಿಕೆಟ್ ನೀಡುವಂತೆ ಆಗ್ರಹಿಸಿದ್ದರೂ ಟಿಕೆಟ್ ನೀಡಿಲ್ಲ ಎಂದು ಇದೇ ವೇಳೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಾಜಿ ಸಚಿವ ಸಿ.ಎಂ. ಉದಾಸಿ ಮಾದಿಗ ಸಮಾಜಕ್ಕೆ ಅನ್ಯಾಯ ಮಾಡಿದ್ದಾರೆ. ಕೂಡಲೆ ಇದನ್ನು ಸರಿಪಡಿಸಿ ಮಾದಿಗ ಸಮುದಾಯಕ್ಕೆ ಟಿಕೆಟ್ ನೀಡಬೇಕೆಂದು ಆಗ್ರಹಿಸಿದ್ದಾರೆ.

Leave a Reply

Your email address will not be published. Required fields are marked *