ಉಗ್ರರ ದಾಳಿ ಖಂಡಿಸಿ ದೇಶಾದ್ಯಂತ ಬಿಜೆಪಿ ಪ್ರೊಟೆಸ್ಟ್

ನವದೆಹಲಿ: ಜಮ್ಮು-ಕಾಶ್ಮೀರದ ಪುಲ್ವಾಮಾದಲ್ಲಿ ನಡೆದ ಆತ್ಮಾಹುತಿ ಬಾಂಬ್‌ ದಾಳಿ ಖಂಡಿಸಿ ಇಂದು ದೇಶಾದ್ಯಂತ ಬಿಜೆಪಿ ಪ್ರತಿಭಟನೆ ನಡೆಸಲಿದೆ. ಜೊತೆಗೆ ಹುತಾತ್ಮ ಯೋಧರಿಗೆ ಬಿಜೆಪಿ ನಾಯಕರು ಶ್ರದ್ಧಾಂಜಲಿ ಸಲ್ಲಿಸಲಿದ್ದಾರೆ. ದೇಶದ ಎಲ್ಲಾ ರಾಜ್ಯಗಳಲ್ಲಿರುವ ಬಿಜೆಪಿ ಕಚೇರಿಗಳ ಮುಂದೆ ಕೇಸರಿ ಪಡೆ ಧರಣಿ ನಡೆಸಲಿದೆ. ಇನ್ನು, ರಾಜ್ಯದಲ್ಲೂ ಉಗ್ರರ ದಾಳಿ ಖಂಡಿಸಿ ಬೆಂಗಳೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ನೇತೃತ್ವದಲ್ಲಿ ಆನಂದ್ ರಾವ್‌ ಸರ್ಕಲ್‌ನಲ್ಲಿ ಧರಣಿ ನಡೆಯಲಿದೆ. ಪ್ರತಿಭಟನೆಯಲ್ಲಿ ಮಾಜಿ ಡಿಸಿಎಂ ಆರ್.ಅಶೋಕ್, ಶಾಸಕ ಅರವಿಂದ ಲಿಂಬಾವಳಿ, ಸಂಸದೆ ಶೋಭಾ ಕರಂದ್ಲಾಜೆ, ಬಿಜೆಪಿ ಮುಖಂಡ ಎನ್.ರವಿಕುಮಾರ್, ಬೆಂಗಳೂರಿನ ಬಿಜೆಪಿ ಕಾರ್ಪೋರೇಟರ್‌ಗಳು ಹಾಗೂ ಬಿಜೆಪಿ ಕಾರ್ಯಕರ್ತರು ಸೇರಿದಂತೆ ಹಲವರು ಪಾಲ್ಗೊಳ್ಳಲಿದ್ದಾರೆ.


Follow us on:

YouTube: firstNewsKannada  Instagram: firstnews.tv  Face Book: firstnews.tv  Twitter: firstnews.tv