ಮರಳು ಪೂರೈಕೆಗೆ ಆಗ್ರಹ: ಹೊನ್ನಾಳಿ ಬಂದ್, ರೇಣುಕಾಚಾರ್ಯ ನೇತೃತ್ವದಲ್ಲಿ ಪ್ರೊಟೆಸ್ಟ್

ದಾವಣಗೆರೆ: ಮುಕ್ತವಾಗಿ ಹೊನ್ನಳ್ಳಿ ಜನರಿಗೆ ಮರಳು ಪೂರೈಕೆ ಮಾಡಬೇಕು ಎಂದು ಆಗ್ರಹಿಸಿ ಹೊನ್ನಾಳಿ ಕ್ಷೇತ್ರದ ಶಾಸಕ ಎಂ.ಪಿ ರೇಣುಕಾಚಾರ್ಯ ನೇತೃತ್ವದಲ್ಲಿ ಇಂದು ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಹೊನ್ನಾಳಿ ಪ್ರಮುಖ ಬೀದಿಯಲ್ಲಿ ಬೈಕ್ ರ್ಯಾಲಿ ನಡೆಸುವ ಮೂಲಕ ಎಂ.ಪಿ ರೇಣುಕಾಚಾರ್ಯ  ಗಮನ ಸೆಳೆದರು.  ಹೊನ್ನಾಳಿ ಕ್ಷೇತ್ರದ ಶಾಸಕ ಎಂ.ಪಿ ರೇಣುಕಾಚಾರ್ಯ ಬಂದ್ ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಅಂಗಡಿ ಮಾಲಿಕರು ಹಾಗೂ ವರ್ತಕರು ಸ್ವಯಂ ಪ್ರೇರಿತವಾಗಿ ಅಂಗಡಿ ಮುಗ್ಗಟ್ಟುಗಳನ್ನು ಬಂದ್ ಮಾಡಿ ಪ್ರತಿಭಟನೆಗೆ ಬೆಂಬಲ ನೀಡಿದ್ದಾರೆ.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗೆ ಸಂಪರ್ಕಿಸಿ: contact@firstnews.tv