ಸಿಪಿಐ ದೂಳಖೇಡ ವಿರುದ್ಧ ಬಿಜೆಪಿ ಪ್ರೊಟೆಸ್ಟ್

ಬಾಗಲಕೋಟೆ: ಬಿಜೆಪಿ ಕಾರ್ಯಕರ್ತರ ಮೇಲೆ ಸುಳ್ಳು ಪ್ರಕರಣ ದಾಖಲಿಸುತ್ತಿದ್ದಾರೆ ಅಂತಾ ಆರೋಪಿಸಿ ಸಿಪಿಐ ದೂಳಖೇಡ ವಿರುದ್ಧ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ರು. ನಗರದ ಎಸ್ಪಿ ಕಚೇರಿ ಎದುರು ಸೇರಿದ ನೂರಾರು ಬಿಜೆಪಿ ಕಾರ್ಯಕರ್ತರು ಸಿಪಿಐ ದೂಳಖೇಡ ಅವರನ್ನು ಬೇರೆಡೆಗೆ ವರ್ಗಾವಣೆ ಮಾಡುವಂತೆ ಆಗ್ರಹಿಸಿದ್ದಾರೆ. ಕಚೇರಿ ಮುಂದೆಯೇ ಪ್ರತಿಭಟನೆ ಕುಳಿತ ಬಿಜೆಪಿ ಕಾರ್ಯಕರ್ತರು ಹಠಾವೋ ಹಠಾವೋ ದೂಳಖೇಡ ಹಠಾವೋ ಅಂತಾ ಘೋಷಣೆ ಕೂಗಿ ತಮ್ಮ ಆಕ್ರೋಶ ಹೊರ ಹಾಕಿದರು. ಅಲ್ಲದೇ ಶಾಸಕ ವೀರಣ್ಣ ಚರಂತಿಮಠ ನೇತೃತ್ವದಲ್ಲಿ ಎಸ್​ಪಿ ಸಿ.ಬಿ.ರಿಷ್ಯಂತ್​ಗೆ, ದೂಳಖೇಡ ಅವರನ್ನು ಶೀಘ್ರವೇ ವರ್ಗಾವಣೆ ಮಾಡುವಂತೆ ಮನವಿ ಸಲ್ಲಿಸಿದ್ರು.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಕ್ಕಾಗಿ ಸಂಪರ್ಕಿಸಿ: contact@firstnews.tv